ಬೀರೂರು: ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರ ದುರಸ್ತಿ ಹಿನ್ನೆಲೆ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆಯ ಮರು ಡಾಂಬರೀಕರಣಕ್ಕೆ ಲೋಕೋಪಯೋಗಿ ಇಲಾಖೆ ಮುಂದಾಗಿದೆ.

ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿದ್ದರೂ ಕೂಡ ಪಟ್ಟಣ ವ್ಯಾಪ್ತಿಯನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದ ಪರಿಣಾಮ ಇಲಾಖೆಯು ₹5.90 ಕೋಟಿ ವೆಚ್ಚದಲ್ಲಿ ಕಡೂರು–ಬೀರೂರು ಪಟ್ಟಣಗಳ ವ್ಯಾಪ್ತಿಯಲ್ಲಿ ರಸ್ತೆ ಮರು ಡಾಂಬರೀಕರಣ ಕಾಮಗಾರಿ ನಡೆಸುತ್ತಿದೆ.

ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರಿಗೆ ಸಂಚಾರ ದುಸ್ತರವಾಗಿದ್ದರ ಬಗ್ಗೆ ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ಹಿನ್ನೆಲೆ ಲೋಕೋಪಯೋಗಿ ಇಲಾಖೆ ಗುಂಡಿಗಳಿಗೆ ಜಲ್ಲಿಯನ್ನು ತುಂಬಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು. ಅಲ್ಲದೆ ರಸ್ತೆಯನ್ನು ದುರಸ್ತಿ ಪಡಿಸುವಂತೆ ಒತ್ತಾಯ ಮಾಡಲಾಗಿತ್ತು. ಆದರೆ, ಈವರೆಗೂ ಯಾವುದೇ ಕ್ರಮಕ್ಕೂ ಹೆದ್ದಾರಿ ಪ್ರಾಧಿಕಾರ ಮುಂದಾಗಿರಲಿಲ್ಲ. ಪಟ್ಟಣ ವ್ಯಾಪ್ತಿಯ ಹೆದ್ದಾರಿ ರಸ್ತೆಯನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ ಬಳಿಕ, ರಸ್ತೆ ಮರು ಡಾಂಬರೀಕರಣ ಮಾಡುತ್ತಿರುವುದು ನಾಗರಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ.

ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಬಸವರಾಜ್ ಮಾತನಾಡಿ, ‘ಪಟ್ಟಣ ವ್ಯಾಪ್ತಿಯಲ್ಲಿ ಹೆದ್ದಾರಿಗಳಾದ ಬಿ.ಎಚ್.ರಸ್ತೆ, ಮಹಾತ್ಮ ಗಾಂಧಿ ವೃತ್ತದ ಬಳಿಯಲ್ಲಿರುವ ಗುಂಡಿಗಳನ್ನು ಸರಿಪಡಿಸಲು ಆದೇಶ ಬಂದಿದ್ದ ಹಿನ್ನೆಲೆ ರಸ್ತೆ ಮರು ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ವಾಹನ ಸಂಚಾರವನ್ನು ಸರಿದೂಗಿಸಿಕೊಂಡು ರಸ್ತೆ ಮರು ಡಾಂಬರೀಕರಣ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.