ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು | ದಾಳಿ: ₹5.71 ಲಕ್ಷದ ಅಕ್ರಮ ಕೀಟನಾಶಕ ಜಪ್ತಿ

Published 25 ಜೂನ್ 2024, 15:29 IST
Last Updated 25 ಜೂನ್ 2024, 15:29 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಯಾವುದೇ ಮಾರಾಟ ಪರವಾನಗಿ ಇಲ್ಲದೇ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು ₹5.71 ಲಕ್ಷ ಮೌಲ್ಯದ ಕೀಟನಾಶಕಗಳನ್ನು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಮಂಗಳವಾರ ವಶಕ್ಕೆ ಪಡೆದಿದೆ.

ತರೀಕೆರೆ ಪಟ್ಟಣದ ಕುಂಬಾರ ಬೀದಿಯ ತೌಸೀಫ್ ಅಹಮದ್ ಎಂಬುವರಿಗೆ ಸೇರಿದ ಮನೆಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ದಾಸ್ತಾನು ಮಾಡಿ ಕೀಟನಾಶಕ ಮಾರಾಟ ಮಾಡುತ್ತಿರುವ ಮಾಹಿತಿ ಆಧರಿಸಿ ತಂಡ ದಾಳಿ ನಡೆಸಿದೆ. ಶೋಧ ಕಾರ್ಯ ನಡೆಸಿದಾಗ ವಿವಿಧ 6 ಕಂಪನಿಗಳಿಗೆ ಸೇರಿದ ಒಟ್ಟು ₹5. 71ಲಕ್ಷ ಮೌಲ್ಯದ ಕೀಟನಾಶಕಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದು ಕಂಡುಬಂದಿದೆ. ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮಕ್ಕೆ ಮುಂದಾಗಿದೆ. ದಾಳಿ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ತಿಮ್ಮನಗೌಡ ಎಸ್.ಪಾಟೀಲ್, ಎಸ್ ವೆಂಕಟೇಶ ಚವ್ಹಾಣ್, ಕೃಷಿ ಅಧಿಕಾರಿ ಶ್ರೀನಿವಾಸ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT