ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಕ್ಲಿನಿಕ್, ಲ್ಯಾಬ್ ಮೇಲೆ ದಾಳಿ; ದಾಖಲೆ ಪರಿಶೀಲನೆ

Published 11 ಡಿಸೆಂಬರ್ 2023, 13:36 IST
Last Updated 11 ಡಿಸೆಂಬರ್ 2023, 13:36 IST
ಅಕ್ಷರ ಗಾತ್ರ

ಕಡೂರು: ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಸೋಮವಾರ ಪಟ್ಟಣದ ಖಾಸಗಿ ಕ್ಲಿನಿಕ್‌ ಮತ್ತು ಲ್ಯಾಬ್‌ಗಳ ಮೇಲೆ ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಸಾರ್ವಜನಿಕ ಆಸ್ಪತ್ರೆ ಬಳಿ ಇರುವ ಸಿಗಂದೂರು ಕ್ಲಿನಿಕ್ ಹಾಗೂ ವಸಡು ರೋಗ ಕ್ಲಿನಿಕ್ ಮತ್ತು ಎಚ್.ಕೆ.ಬಿ.ಎನ್ ಲ್ಯಾಬೋರೇಟರಿ, ಮಾರುತಿ ಡಯಾಗ್ನಾಸ್ಟಿಕ್ ಲ್ಯಾಬ್, ವೆಂಕಟೇಶ್ವರ ಲ್ಯಾಬ್, ಕಾಮಧೇನು ಲ್ಯಾಬ್‌ಗೆ ಭೇಟಿ ನೀಡಿದ ಅಧಿಕಾರಿಗಳು ನೊಂದಣಿಯಾಗದ ಮತ್ತು ಸಮರ್ಪಕ ದಾಖಲೆ ನೀಡದ ಕ್ಲಿನಿಕ್‌ಗಳಿಗೆ ಬಾಗಿಲು ಹಾಕಿಸಿದರು. ಕೂಡಲೇ ನೊಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ಅನುಮತಿ ಪಡೆದ ನಂತರವಷ್ಟೆ ಕಾರ್ಯಾರಂಭ ಮಾಡಬೇಕು ಎಂದು ಎಚ್ಚರಿಕೆ ನೀಡಿದರು. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲೂ ಅನುಮತಿ ಪಡೆಯದ ಲ್ಯಾಬ್‌, ಕ್ಲಿನಿಕ್‌ಗಳ ಮೇಲಿನ ಕಾರ್ಯಾಚರಣೆ ಮಂಗಳವಾರವೂ ಮುಂದುವರಿಯಲಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶ್ವತ್ಥ್‌ ಬಾಬು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿಕಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT