ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು | ಮುಂದುವರಿದ ಮಳೆ: ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌

Published 5 ಜುಲೈ 2023, 4:34 IST
Last Updated 5 ಜುಲೈ 2023, 4:34 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮಲೆನಾಡು ಭಾಗದಲ್ಲಿ ಜೋರಾಗಿ ಸುರಿಯುತ್ತಿದೆ.

ಕೊಟ್ಟಗೆಹಾರ ಸುತ್ತಮುತ್ತ ಧಾರಾಕಾರವಾಗಿ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಜಿಟಿಜಿಟಿ ಮಳೆಯಾಗುತ್ತಿದೆ. ಕಳಸ ಸಮೀಪದ ಚನ್ನಡಲು ರಸ್ತೆ ಮೇಲೆ ಮರ ಬಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.

ಮಲೆನಾಡು ಭಾಗದಲ್ಲಿ ಮಳೆ ಜೋರಾದರೆ ಪರಿಸ್ಥಿತಿ ಅವಲೋಕಿಸಿ ಶಾಲಾ ಕಾಲೇಜಿಗೆ ರಜೆ ನೀಡುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಆಲೋಚಿಸಿದ್ದಾರೆ.

ಜಿಲ್ಲೆಯಾದ್ಯಂತ ಇನ್ನೂ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಿಸಿದೆ,

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT