ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರಸಿಂಹರಾಜಪುರ: ಸಿಡಿಲು ಬಡಿದು 25 ಅಡಿಕೆ ಮರಕ್ಕೆ ಹಾನಿ

Published 20 ಏಪ್ರಿಲ್ 2024, 15:44 IST
Last Updated 20 ಏಪ್ರಿಲ್ 2024, 15:44 IST
ಅಕ್ಷರ ಗಾತ್ರ

ನರಸಿಂಹರಾಜಪುರ: ತಾಲ್ಲೂಕಿನಲ್ಲಿ ಶನಿವಾರ ಬೆಳಗ್ಗಿನ ಜಾವ ಗುಡುಗು ಸಹಿತ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ.

ತಾಲ್ಲೂಕಿನ ಗುಬ್ಬಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಚಿಕೆರೆಯ ಬಂಧನಮಕ್ಕಿ ನಿವಾಸಿ ವಸಂತ ಎಂಬುವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು 25 ಅಡಿಕೆ ಮರಗಳಿಗೆ ಹಾನಿ ಉಂಟಾಗಿದೆ. ಬಿ.ಎಚ್.ಕೈಮರದ ಸರ್ಕಾರಿ ಪ್ರಾಥಮಿಕ ಶಾಲೆಯ ತಡೆಗೋಡೆ ಕುಸಿದುಬಿದ್ದಿದೆ.

ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟೇಶ್ ಎಂಬುವರ ಮನೆ ಮೇಲೆ ಮರಬಿದ್ದು ಹಾನಿ ಸಂಭವಿಸಿದೆ. ಸಿಂಸೆ ಗ್ರಾಮದ ಮಂಜುನಾಥ್ ಎಂಬುವರ ಮನೆ ಮೇಲೆ ಅಡಿಕೆ ಮರಬಿದ್ದು ಹಾನಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT