ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು: ಎಲ್ಲೆಡೆ ತಂಪೆರೆದ ಮಳೆ

Published 13 ಮೇ 2024, 14:20 IST
Last Updated 13 ಮೇ 2024, 14:20 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಹುತೇಕ ಕಡೆ ಭಾನುವರ ರಾತ್ರಿ ಮಳೆ ಸುರಿದಿದ್ದು, ಎಲ್ಲೆಡೆ ತಂಪೆರೆದಿದೆ.

ಮಧ್ಯರಾತ್ರಿ ಆರಂಭವಾದ ಮಳೆ ಎಡಬಿಡದೆ ಗಂಟೆ ಗಟ್ಟೆಲೆ ಸುರಿಯಿತು. ಬರದಿಂದ ಬಳಲಿದ್ದ ಕಡೂರು, ತರೀಕೆರೆ ತಾಲ್ಲೂಕಿನಲ್ಲಿ ಹದ ಮಳೆಯಾಗಿದೆ.

ಅಜ್ಜಂಪುರ ತಾಲ್ಲೂಕಿನ ಹಲವೆಡೆ ಸಾಧಾರಣ ಮಳೆಯಾಗಿದೆ. ಅತೀ ಹೆಚ್ಚು ನೀರಿನ ತೊಂದರೆ ಅನುಭವಿಸುತ್ತಿರುವ ಶಿವನಿ ಹೋಬಳಿಯಲ್ಲಿ ಮಳೆಯಾಗಿಲ್ಲ. ಒಂದೆರಡು ದಿನದಲ್ಲಿ ಮಳೆ ಬರಬಹುದು ಎಂಬ ನಿರೀಕ್ಷೆಯಲ್ಲಿ ರೈತರಿದ್ದಾರೆ.

ಮಲೆನಾಡು ಭಾಗವಾದ ಎನ್.ಆರ್.ಪುರ, ಶೃಂಗೇರಿ, ಕಳಸ, ಬಾಳೆಹೊನ್ನೂರು, ಮೂಡಿಗೆರೆ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಸಂತಸ ಉಂಟು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT