ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭರವಸೆ ಹುಸಿಗೊಳಿಸಿದ ರಾಜ್ಯ ಸರ್ಕಾರ: ಟೀಕೆ

Published 18 ಜೂನ್ 2024, 14:42 IST
Last Updated 18 ಜೂನ್ 2024, 14:42 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಹಲವು ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈಗ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳದ ಮೂಲಕ ನಿರೀಕ್ಷೆ ಹುಸಿಗೊಳಿಸಿದೆ ಎಂದು ಆಮ್‌ ಆದ್ಮಿ ಪಕ್ಷದ ಜಿಲ್ಲಾ ಘಟಕದ ಮಾಧ್ಯಮ ಉಸ್ತುವಾರಿ ಕೆ.ಸುಂದರಗೌಡ ಟೀಕಿಸಿದ್ದಾರೆ.

ರಾಜ್ಯದಲ್ಲಿ ಛಾಪಾಕಾಗದ, ವಿದ್ಯುತ್ ಶುಲ್ಕ ಏರಿಕೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣದ ಹಗರಣ ಬೆಳಕಿಗೆ ಬಂದಿದೆ. ಈ ನಡುವೆ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಮಾಡಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ. ದೈನಂದಿನ ಜೀವನದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯಿಂದ ಬಡವರು, ಸಾಮಾನ್ಯ ವರ್ಗದವರಿಗೆ ದೊಡ್ಡ ಪೆಟ್ಟು ಬೀಳಲಿದೆ. ಈ ಮೂಲಕ ಸರ್ಕಾರ ಬಡವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ದೂಷಿಸಿದ್ದಾರೆ.

ದೆಹಲಿ ಸರ್ಕಾರ ಉಚಿತ ಯೋಜನೆಗಳನ್ನು ನೀಡಿದರೂ ಯಾವುದೇ ತೆರಿಗೆ ಹೆಚ್ಚಳ ಮಾಡಿಲ್ಲ. ಶಿಕ್ಷಣ, ಆರೋಗ್ಯ ಮತ್ತು ಸಾರಿಗೆ ಸವಲತ್ತುಗಳನ್ನು ನೀಡಿ ಮಾದರಿಯಾಗಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT