ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮನ ಪರಿಕಲ್ಪನೆ ನೀಡಿದ ವಾಲ್ಮೀಕಿ

ವಾಲ್ಮೀಕಿ ಜಯಂತಿಯಲ್ಲಿ ಡಿ.ಎನ್‌. ಜೀವರಾಜ್‌
Last Updated 10 ಅಕ್ಟೋಬರ್ 2022, 3:05 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ನರಸಿಂಹರಾಜಪುರ: ಶ್ರೀರಾಮಚಂದ್ರನ ಕಲ್ಪನೆಯನ್ನು ಕೊಟ್ಟು ರಾಮಾಯಣ ಬರೆದ ಶ್ರೇಯಸ್ಸು ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಹೇಳಿದರು.

ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಗೆಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಾಲ್ಮೀಕಿ ಜಯಂತಿ ಆಚರಿಸುವುದರಿಂದ ಮುಂದಿನ ಜನಾಂಗಕ್ಕೆ ವಾಲ್ಮೀಕಿ ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಾಧ್ಯ. ವಾಲ್ಮೀಕಿ ಜಯಂತಿ ಆಚರಣೆ ಸಂದರ್ಭದಲ್ಲಿ ಪರಿಶಿಷ್ಟರ ಮೀಸಲಾತಿ ಹೆಚ್ಚಿಸಿದ ಶ್ರೇಯಸ್ಸು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲುತ್ತದೆ ಎಂದರು.

ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿಯು ವಾಲ್ಮೀಕಿ ಸಮುದಾಯದ ಸ್ವಾಮೀಜಿ ಹೋರಾಟದ ಫಲವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಸರ್ವಪಕ್ಷಗಳು ಮೀಸಲಾತಿ ಹೆಚ್ಚಳಕ್ಕೆ ಬೆಂಬಲ ನೀಡಿದ್ದಾರೆ ಎಂದರು.

ವಾಲ್ಮೀಕಿ ಸಂಘದ ಕ್ಷೇತ್ರಾಧ್ಯಕ್ಷ ಶ್ರೀನಿವಾಸ್ ಮಾತನಾಡಿ, ಇಪ್ಪತ್ತು ವರ್ಷಗಳ ಹೋರಾಟದ ಫಲವಾಗಿ ಮೀಸಲಾತಿ ಹೆಚ್ಚಳವಾಗಿದೆ ಎಂದರು.

ತರಿಕೇರೆ ತಾಲ್ಲೂಕು ಕುಡ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಎಚ್.ಲೋಹಿತ್ ಕುಮಾರ್ ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು.

ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ವಹಿಸಿದ್ದರು.

ಪಟ್ಟಣ ಪಂಚಾಯಿತಿ ಸದಸ್ಯ ಸೈಯದ್ ವಸೀಂ, ಬಿಇಒ ಪುಷ್ಪಾ, ಗ್ರೇಡ್ 2 ತಹಶೀಲ್ದಾರ್ ಚಂದ್ರಶೇಖರ್, ದಲಿತ ಸಂಘರ್ಷ ಸಮಿತಿಯ ಡಿ.ರಾಮು, ವಾಲ್ಮೀಕಿ ಸಂಘದ ನಾಗರಾಜ್, ಸಂದೀಪ್, ಜೈಭೀಮ್ ಸಂಘದ ತಾಲ್ಲೂಕು ಅಧ್ಯಕ್ಷ ರವಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಂಜುನಾಥ್, ಮುಖಂಡ ಎಚ್.ಎಂ.ಶಿವಣ್ಣ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಮನೀಷ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನಿರಂಜನ್, ಧನಂಜಯ ಮೇದೂರ, ಶಿಕ್ಷಕ ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT