ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಜಾರಕಿಹೊಳಿ, ಯೋಗೇಶ್ವರ್, ಶಾಸಕ ಎಂ.ಪಿ ಕುಮಾರಸ್ವಾಮಿ ಭೇಟಿ: ಮಾತುಕತೆ

Last Updated 23 ಜನವರಿ 2021, 13:01 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಸಣ್ಣ ನೀರಾವರಿ ಸಚಿವ ಸಿ.ಪಿ. ಯೋಗೇಶ್ವರ್, ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಭೇಟಿಯಾಗಿ ಚರ್ಚಿಸಿದ್ದಾರೆ.

ನಗರದ ಹೊರ ವಲಯದ ಸೆರಾಯ್‌ ಹೋಟೆಲ್‌ನಲ್ಲಿ ಶನಿವಾರ ಬೆಳಿಗ್ಗೆ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಅವರೂ ಇದ್ದರು.

ರಮೇಶ ಜಾರಕಿಹೊಳಿ ಸುದ್ದಿಗಾರರೊಂದಿಗೆ ಮಾತನಾಡಿ, ‘ನೀರಾವರಿ ಯೋಜನೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಬೇರೆ ವಿಶೇಷ ಏನು ಇಲ್ಲ’ ಎಂದು ಪತ್ರಿಕ್ರಿಯಿಸಿದರು.

‘ಕಡಹಿನ ಬೈಲು ಏತ ನೀರಾವರಿ ಯೋಜನೆ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡಬೇಕು, ಪೈಪ್‌ಲೈನ್‌ ವಿಸ್ತರಣೆಗೆ ಕ್ರಮ ವಹಿಸಬೇಕು ಎಂದು ಸಣ್ಣ ನೀರಾವರಿ ಸಚಿವರಿಗೆ ಮನವಿ ಸಲ್ಲಿಸಿದೆ. ಬೇರೆ ಯಾವ ವಿಚಾರ ಚರ್ಚಿಸಿಲ್ಲ’ ಎಂದು ಶಾಸಕ ಟಿ.ಡಿ.ರಾಜೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮೂಡಿಗೆರೆ ಕ್ಷೇತ್ರ ವ್ಯಾಪ್ತಿಯ ಮಳಲೂರು ಏತ ನೀರಾವರಿ ಯೋಜನೆ ಶುರುವಾಗಿ ಒಂಬತ್ತು ವರ್ಷವಾಗಿದೆ, ಇನ್ನು ಮುಗಿದಿಲ್ಲ. ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಜಲ ಸಂಪನ್ಮೂಲ ಸಚಿವರಿಗೆ ಮನವಿ ಮಾಡಿದೆ. ರಾಜಕೀಯ ವಿಚಾರ ಪ್ರಸ್ತಾಪವಾಗಿಲ್ಲ’ ಎಂದು ಶಾಸಕ ಕುಮಾರಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT