ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ತಾಯಿ ಸೇರಿ ನಾಲ್ವರಿಗೆ 20 ವರ್ಷ ಜೈಲು

Published 11 ಮಾರ್ಚ್ 2024, 15:42 IST
Last Updated 11 ಮಾರ್ಚ್ 2024, 15:42 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಮೂರು ವರ್ಷಗಳ ಹಿಂದೆ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಲಕಿಯ ತಾಯಿ ಸೇರಿ ನಾಲ್ವರಿಗೆ ಜಿಲ್ಲಾ ತ್ವರಿತಗತಿ ನ್ಯಾಯಾಲಯ(ಪೋಕ್ಸೊ) 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಬಾಲಕಿ ತಾಯಿ ಮತ್ತು ಇಬ್ಬರಿಗೆ 20 ವರ್ಷ ಜೈಲುವಾಸದ ಶಿಕ್ಷೆ ಹಾಗೂ ಪ್ರಮುಖ ಆರೋಪಿಗೆ 22 ವರ್ಷ ಜೈಲು ಮತ್ತು ₹25 ಸಾವಿರ ದಂಡ ವಿಧಿಸಿದೆ.

ಶೃಂಗೇರಿ ಸಮೀಪದ ಹಳ್ಳಿಯೊಂದರಲ್ಲಿ ಬಾಲಕಿಯನ್ನು ಅಕ್ರಮ ಚಟುವಟಿಕೆಗೆ ದೂಡಿದ್ದರ ಬಗ್ಗೆ ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಅಂದಿನ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೃತಿ ನೇತೃತ್ವದಲ್ಲಿ ತನಿಖೆ ನಡೆದಿತ್ತು. 35 ಪ್ರಕರಣಗಳನ್ನು ದಾಖಲಿಸಲಾಗಿತ್ತು. ತಾಯಿ ಸೇರಿ 53 ಜನರನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು.

49 ಜನರನ್ನು ಖುಲಾಸೆಗೊಳಿಸಿ ನಾಲ್ವರನ್ನು ತಪ್ಪಿತಸ್ಥರು ಎಂದು ತೀರ್ಮಾನಿಸಿದ್ದ ನ್ಯಾಯಾಲಯ, ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್‌ಕುಮಾರ್ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT