ಚಿಕ್ಕಮಗಳೂರು: ‘ರೇಣುಕಾಚಾರ್ಯರು ವೀರಶೈವ ಧರ್ಮ ವೃಕ್ಷದ ಬೇರಾದರೆ ಆ ವೃಕ್ಷದ ಹಣ್ಣು ಬಸವೇಶ್ವರರು. ಆಚಾರ್ಯರ ತತ್ವ ಸಿದ್ಧಾಂತ, ಶರಣರ ಸಾಮಾಜಿಕ ಚಿಂತನೆಗಳು ಮನುಷ್ಯನ ಬದುಕಿಗೆ ದಾರಿದೀಪ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.

ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಭಕ್ತಿ ಭಂಡಾರಿ ಬಸವೇಶ್ವರ ಜಯಂತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

‘ಸಕಲ ಮಾನವರಿಗೂ ಒಳಿತನ್ನು ಬಯಸುವುದೇ ನಿಜವಾದ ಧರ್ಮ. ಹಚ್ಚುವುದಾದರೆ ದೀಪ ಹಚ್ಚಬೇಕೆ ಹೊರತು ಬೆಂಕಿಯನ್ನಲ್ಲ. ಆರಿಸುವುದಾದರೆ ನೋವನ್ನು ಆರಿಸಬೇಕೆ ಹೊರತು ನಗುವನ್ನಲ್ಲ. ಇದನ್ನು ರೇಣುಕಾಚಾರ್ಯರು ರೇಣುಕ ಗೀತೆಯಲ್ಲಿ ಬೋಧಿಸಿದ್ದಾರೆ. ಸಪ್ತ ಸೂತ್ರ ಹೇಳಿದ ಬಸವೇಶ್ವರರು ಸುಳ್ಳು ಮಾತನಾಡಬಾರದೆಂದು ಹೇಳಿದ್ದಾರೆ. ಅರಿತು ಆಚರಿಸಿ ಬಾಳುವುದೇ ನಿಜವಾದ ಧರ್ಮ ಎಂದು ಪೂರ್ವಜರು ಒತ್ತಿ ಹೇಳಿದ್ದಾರೆ’ ಎಂದು ವಿವರಿಸಿದರು.

‘ಬಹುಜನ್ಮಗಳ ಪುಣ್ಯ ಫಲದಿಂದ ಮಾನವ ಜನ್ಮ ಪ್ರಾಪ್ತವಾಗಿದೆ. ಮನುಷ್ಯ ಜೀವನದಲ್ಲಿ ಅಂದವಾಗಿ ಇರುವುದಕ್ಕಿಂತ ಆನಂದದಿಂದ ಬಾಳುವುದು ಉತ್ತಮ. ಭೌತಿಕ ಸಿರಿ ಸಂಪತ್ತುಗಳಿಗಿಂತ ಮನುಷ್ಯನಿಗೆ ಆಧ್ಯಾತ್ಮ ಸಂಪತ್ತು ಮತ್ತು ಶಾಂತಿ ಮುಖ್ಯ’ ಎಂದರು.

‘ಡೋಣಿ ಮುಳುಗಲು ಒಂದು ಸಣ್ಣ ರಂಧ್ರ ಸಾಕು. ಬದುಕು ಮುಳುಗಲು ಒಂದು ಕೆಟ್ಟ ನಿರ್ಧಾರ ಸಾಕು. ಆದ್ದರಿಂದ ಮನುಷ್ಯ ವಿವೇಚನೆಯಿಂದ ಮಾತನಾಡುವುದು ಶ್ರೇಯಸ್ಕರ. ರೇಣುಕಾಚಾರ್ಯ ಟ್ರಸ್ಟಿನಿಂದ ಪ್ರತಿ ವರ್ಷ ಜಯಂತ್ಯುತ್ಸವ ಆಚರಿಸಲಾಗುತ್ತಿದೆ. ಇದು ಸಂತೋಷದ ವಿಷಯ’ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ, ‘ಮಾನವ ಜೀವನದ ಉನ್ನತಿಗೆ ಮತ್ತು ಶ್ರೇಯಸ್ಸಿಗೆ ಧರ್ಮವೇ ಮೂಲ. ರೇಣುಕಾಚಾರ್ಯರು ತಮ್ಮ ಸಿದ್ಧಾಂತಗಳಲ್ಲಿ ಸಾರ್ವಕಾಲಿಕ ಸತ್ಯ ಸಂಗತಿಗಳನ್ನು ಬೋಧಿಸಿದ್ದಾರೆ. ಆ ಉನ್ನತ ದಾರಿಯಲ್ಲಿ ಬಸವಣ್ಣನವರು ಮುನ್ನಡೆದು ಆಧ್ಯಾತ್ಮ ರಂಗದಲ್ಲಿ ಅದ್ಭುತ ಸಾಧನೆಗೈದರು’ ಎಂದು ವಿವರಿಸಿದರು.

ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಬಸವೇಶ್ವರರು ವೀರಶೈವ ಧರ್ಮ ಸ್ವೀಕರಿಸಿ ಮತ್ತಷ್ಟು ಬೆಳೆಸಿದರು. ರೇಣುಕಾಚಾರ್ಯರ ಮತ್ತು ಬಸವೇಶ್ವರರ ವಿಚಾರ ಧಾರೆಗಳು ಯುವ ಸಮೂಹಕ್ಕೆ ಆಶಾ ಕಿರಣ’ ಎಂದು ಪ್ರತಿಪಾದಿಸಿದರು.

ಬೇರುಗಂಡಿ ಬೃಹನ್ಮಠದ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರು ರೇಣುಕಾಚಾರ್ಯರ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ಕುರಿತು ಉಪದೇಶ ನೀಡಿದರು. ಟ್ರಸ್ಟಿನ ಖಜಾಂಚಿ ಯು.ಎಂ.ಬಸವರಾಜ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿನ ಗೌರವ ಕಾರ್ಯದರ್ಶಿ ಸಿ.ವಿ.ಮಲ್ಲಿಕಾರ್ಜುನ್, ಸದಸ್ಯರಾದ ಎಮ್.ಡಿ.ಪುಟ್ಟಸ್ವಾಮಿ, ಎಚ್.ಎನ್.ನಂಜೇಗೌಡ, ಎಸ್.ಎಂ.ದೇವಣ್ಣಗೌಡ, ಬಿ.ಎಂ.ಶಿವಶಂಕರ್ iದ್ದರು.

ರೇಣುಕಾಚಾರ್ಯ ಮಂದಿರದ ಪ್ರಧಾನ ಅರ್ಚಕ ಪುಷ್ಪಯ್ಯಸ್ವಾಮಿ ಅವರಿಗೆ ರಂಭಾಪುರಿ ಶ್ರೀಗಳು ಗುರುರಕ್ಷೆ ನೀಡಿದರು. ಇದೇ ವೇಳೆ 15 ವಟುಗಳಿಗೆ ಶಿವದೀಕ್ಷಾ ಸಂಸ್ಕಾರ ಜರುಗಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.