ಕಡೂರು: ‘ರಾಜ್ಯ ಸರ್ಕಾರವು ಒಳಮೀಸಲಾತಿ ಜಾರಿಗೆ ತರಾತುರಿ ಮಾಡದೆ ಯಥಾಸ್ಥಿತಿ ಮುಂದುವರಿಸಬೇಕೆಂದು ಒತ್ತಾಯಿಸಿ, ಬಂಜಾರ, ಭೋವಿ ಮತ್ತಿತರ ಸಮುದಾಯಗಳು ಬಂಜಾರ ಮತ್ತು ಭೋವಿ ಪೀಠದ ಶ್ರೀಗಳ ನೇತೃತ್ವದಲ್ಲಿ ಮಾರ್ಚ್ 24ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಿದೆ. ಬಂಜಾರ ಸಮುದಾ ಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಬಂಜಾರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕುಮಾರ ನಾಯ್ಕ್ ಮನವಿ ಮಾಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಮಾಜದ ಮುಖಂಡರ ಸಭೆ ಬಳಿಕ, ಈ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರವು 6:6:5 ಅನುಪಾತದಲ್ಲಿ ಒಳ ಮೀಸಲಾತಿ ಜಾರಿಗೆ ಹೊರಟಿತ್ತು. ಆದರೆ, ಮೀಸಲಾತಿ ಶೇ 50 ಮೀರಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದರಿಂದ ಯಥಾಸ್ಥಿತಿ ಶೇ 15ನ್ನು ಕಾಪಾಡುವ ಅನಿವಾರ್ಯತೆ ಇದೆ. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರವು 56 ಸಾವಿರ ಹುದ್ದೆಗಳ ಭರ್ತಿಗೂ ಮುಂದಾಗಿದೆ. ಅದನ್ನು ಒಳ ಮೀಸಲಾತಿಯಂತೆ ಅನುಷ್ಠಾನಗೊಳಿಸಲು ಮಾರ್ಚ್ 27ರಂದು ಸಂಪುಟ ಸಭೆ ಕರೆದಿದೆ. ಇಲ್ಲಿ ಕೈಗೊಳ್ಳುವ ನಿರ್ಧಾರದಲ್ಲಿ ಬಂಜಾರ, ಭೋವಿ ಮತ್ತು ಕೊರಚ ಕೊರಮ ಸಮುದಾಯಕ್ಕೆ ಅನ್ಯಾಯವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಒಳಮೀಸಲಾತಿ ವಿಚಾರವಾಗಿ ಸರ್ಕಾರ ಆತುರದ ಕ್ರಮ ವಹಿಸಬಾರದು ಎಂದು ಒತ್ತಾಯಿಸಿ, ಸರ್ದಾರ್ ಸೇವಾಲಾಲ್ ಸ್ವಾಮೀಜಿ ಹಾಗೂ ಭೋವಿ ಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಕರೆಕೊಟ್ಟಿರುವ ಪ್ರತಿಭಟನೆಯಲ್ಲಿ ನಾಲ್ಕೂ ಸಮುದಾಯದ ಬಂಧುಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಬಂಜಾರ ಸಮಾಜದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪ್ರಕಾಶ್ ನಾಯ್ಕ್ ಮಾತನಾಡಿ, ‘ಶೇ 15ರ ಮೀಸಲಾತಿಯಲ್ಲಿ ನಾಲ್ಕೂ ಸಮುದಾಯಗಳಿಗೆ ಅನ್ಯಾಯವಾಗದಂತೆ, ಯಥಾಸ್ಥಿತಿ ಕಾಪಾಡಬೇಕು ಎನ್ನುವುದು ನಮ್ಮ ಹಕ್ಕೊತ್ತಾಯ. ರಾಜ್ಯ ಸರ್ಕಾರ ನಮ್ಮ ಹೋರಾಟವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದರು. ಭೋವಿ ಸಮಾಜದ ಅಧ್ಯಕ್ಷ ನಾಗರಾಜ್, ಬಂಜಾರ ಸಮಾಜದ ಮುಖಂಡರಾದ ಕೋಡಿಹಳ್ಳಿ ರಾಜಾ ನಾಯ್ಕ್, ಸೋಮನಹಳ್ಳಿ ಸತೀಶ್ ನಾಯ್ಕ್, ದೇವರಾಜ್ ನಾಯ್ಕ್, ತಂಗಲಿ ಶ್ರೀನಿವಾಸ್ ನಾಯ್ಕ್, ದೇವರಾಜ್ ನಾಯ್ಕ, ವಕೀಲ ರಾಮಚಂದ್ರ ನಾಯ್ಕ್, ಶ್ರೀನಿವಾಸ್ ನಾಯ್ಕ್ ರಾಜೇಶ್ ನಾಯ್ಕ್, ರಂಗನಾಥ್ ನಾಯ್ಕ್, ಮಿಥುನ್, ಶಶಿಕುಮಾರ್, ವಸಂತ ನಾಯ್ಕ್, ಜಯಂತ್, ರಘು, ಸುರೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260318-126-424859072

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.