ತರೀಕೆರೆ: ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ದಾಖಲೆ ರಹಿತ ನಿವಾಸಿಗಳ ಸಮಸ್ಯೆ ಪರಿಹಾರವಾಗುತ್ತಿದೆ. ಈಗಾಗಲೇ 101 ಕಂದಾಯ ಗ್ರಾಮ ಮತ್ತು ಉಪಗ್ರಾಮಗಳನ್ನು ಗುರುತಿಸಲಾಗಿದ್ದು, 53 ಗ್ರಾಮಗಳ ರಚನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಜಿ.ಹೆಚ್. ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ಬಯಲು ರಂಗಮಂದಿರದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕಂದಾಯ ಗ್ರಾಮ, ಉಪಗ್ರಾಮ, 94ಸಿ, ಪೋಡಿ ಮುಕ್ತ ಗ್ರಾಮ, ಸ್ವಾಮಿತ್ವ ಯೋಜನೆಯ ಹಕ್ಕುಪತ್ರಗಳು, ದಾಖಲೆಗಳು ಹಾಗೂ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಾಖಲೆ ರಹಿತ ನಿವಾಸಿಗಳಿಗೆ ಕಂದಾಯ ಗ್ರಾಮ ಮತ್ತು ಉಪ ಗ್ರಾಮಗಳ ರಚನೆ ಮಾಡುವ ಮೂಲಕ ಹಕ್ಕುಪತ್ರ ನೀಡಲು ಯೋಚಿಸಲಾಗಿತ್ತು. ಆ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಅವರ ಜೊತೆ ಚರ್ಚೆ ನಡೆಸಲಾಯಿತು. ನಂತರ, ಇದನ್ನು ಅಧಿವೇಶನದಲ್ಲಿಯೂ ಪ್ರಸ್ತಾಪಿಸಲಾಯಿತು ಎಂದರು.

ಅಧಿಕಾರ ಬಂದ ನಂತರ ಕ್ಷೇತ್ರದಲ್ಲಿ ಹಲವಾರು ಗ್ರಾಮಗಳಿಗೆ ಭೇಟಿ ನೀಡಿದಾಗ ಜನರು ಈ ಬಗ್ಗೆ ಪ್ರಸ್ತಾಪಿಸುತ್ತಿದ್ದರು. ಇದನ್ನು ಮನಗಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ನಡೆದ ಪ್ರಯತ್ನದಿಂದ ಲಕ್ಷಾಂತರ ಕುಟುಂಬಗಳಿಗೆ ಹಕ್ಕುಪತ್ರ ದೊರಕುವಂತಾಗಿದೆ. ನಮ್ಮ ಕ್ಷೇತ್ರದಲ್ಲಿ 10 ಸಾವಿರ ಕುಟುಂಬಗಳಿಗೆ 2025ರೊಳಗೆ ಹಕ್ಕುಪತ್ರ ಕೊಡಿಸಬೇಕೆಂಬ ಗುರಿಯಿದೆ. ಸದ್ಯ 206 ಹಕ್ಕುಪತ್ರವನ್ನು ನೀಡಲಾಗುತ್ತಿದ್ದು, ಪೋಡಿ ಆಂದೋಲನದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಎನ್.ವಿ. ನಟೇಶ್ ಮಾತನಾಡಿ, ‘ದರಖಾಸ್ತು ಜಮೀನುಗಳ ಪೋಡಿ ಕಾರ್ಯ ಅತ್ಯಂತ ಕಷ್ಟಕರವಾಗಿತ್ತು, ಸರ್ಕಾರ ಇತ್ತೀಚೆಗೆ ಪೋಡಿ ಕಾರ್ಯವನ್ನು ಸುಲಭಗೊಳಿಸಿದೆ. ದಾಖಲೆ ಇಲ್ಲದೆ ವಾಸ ಮಾಡುತ್ತಿರುವ ಮನೆಗಳಿಗೆ ಹಕ್ಕುಪತ್ರ ಪಡೆಯಲು ಹಲವು ದಶಕಗಳಿಂದ ಎಡತಾಕುತ್ತಿದ್ದ ಜನರಿಗೆ ಇದೀಗ ಹಕ್ಕುಪತ್ರಗಳು ದೊರಕುತ್ತಿವೆ’ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆರ್. ದೇವೇಂದ್ರಪ್ಪ ಮಾತನಾಡಿ, ಶಾಸಕರ ವಿಶೇಷ ಕಾಳಜಿ ಮತ್ತು ಎಲ್ಲ ಅಧಿಕಾರಿಗಳ, ಜನಪ್ರತಿನಿಧಿಗಳ ಶ್ರಮಿದಿಂದ ಕಾರ್ಯಕ್ರಮ ಯಶಸ್ಸು ಕಂಡಿದೆ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್. ಅನಂತಪ್ಪ, ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಕೆಡಿಪಿ ಸದಸ್ಯ ಎಚ್.ಎನ್. ಮಂಜುನಾಥ್ ಮಾತನಾಡಿದರು.

ತಹಶೀಲ್ದಾರ್ ವಿಶ್ವಜಿತ್ ಮೆಹತಾ, ಪುರಸಭೆ ಸದಸ್ಯರಾದ ದಾದಾಪೀರ್, ಆದಿಲ್ಪಾಷಾ, ಮಾಜಿ ಅಧ್ಯಕ್ಷ ಟಿ.ಎಸ್. ವರ್ಮಪ್ರಕಾಶ್, ತಾ.ಪಂ. ಕೆಡಿಪಿ ಸದಸ್ಯರಾದ ರಚನಾ ಶ್ರೀನಿವಾಸ್, ಗಂಗಾಧರ್, ಮಲ್ಲಿಕಾರ್ಜುನ್, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ಸಹಾಯಕ ಕೃಷಿ ನಿರ್ದೇಶಕ ಲೋಕೇಶಪ್ಪ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಯತಿರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್ ಇದ್ದರು.

‘ಸರ್ಕಾರದ ಸೌಲಭ್ಯಗಳು ನೇರವಾಗಿ ಜನರಿಗೆ ತಲುಪಬೇಕು’ ಸರ್ಕಾರದ ಸೌಲಭ್ಯಗಳು ನೇರವಾಗಿ ಜನರಿಗೆ ತಲುಪಬೇಕು ಎಂಬುದು ಸರ್ಕಾರದ ಆಶಯ. ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ವಿಧಾನಸಭೆಯಲ್ಲಿ ಹಕ್ಕುಪತ್ರ ವಿಚಾರ ಪ್ರಸ್ತಾಪಿಸಿದ ಕಾರಣ ತರೀಕೆರೆಯ ಮೂಲಕ ರಾಜ್ಯದ ಸಮಸ್ಯೆ ಬಗೆಹರಿದಂತಾಗಿದೆ. ಜಿಲ್ಲೆಯಲ್ಲಿ 527 ಬಾಲ ಗರ್ಭಿಣಿಯರಿದ್ದು ಇದು ದೊಡ್ಡ ಪಿಡುಗಾಗಿದೆ. ಇದರ ಪರಿಹಾರಕ್ಕಾಗಿ ಪ್ರತಿಯೊಬ್ಬರೂ ಕೈಗೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.