ಮಂಗಳವಾರ, ಫೆಬ್ರವರಿ 18, 2020
22 °C

ಚಿಕ್ಕಮಗಳೂರು: ಲಾರಿ ಹರಿದು ಸೈಕಲ್ ಸವಾರನಿಗೆ ಗಾಯ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ನಗರದ ಬಸವನಹಳ್ಳಿ ಕೆರೆ ಸಮೀಪ ಕತ್ರಿಮಾರಮ್ಮ ದೇಗುಲ ಬಳಿ ಲಾರಿ ಡಿಕ್ಕಿಯಾಗಿ ಸೈಕಲ್ ಸವಾರ ದಂಟರಮಕ್ಕಿಯ ಜಗದೀಶ (35) ತೀವ್ರ ಗಾಯಗೊಂಡಿದ್ದಾರೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವಘಡ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ದಂಟರಮಕ್ಕಿ ಕಡೆಯಿಂದ ಬಂದ ಲಾರಿ, ಸೈಕಲ್‌ಗೆ ಡಿಕ್ಕಿ ಹೊಡೆದಿದ್ದು, ಸೈಕಲ್ ಸವಾರನ ಕಾಲುಗಳ ಮೇಲೆ ಲಾರಿ ಹರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿ ಚಾಲಕ ಪರಾರಿಯಾಗಿದ್ದಾನೆ. ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು