ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪ | ರಸ್ತೆ ಬದಿ ಪಾರ್ಕಿಂಗ್‌: ತಪ್ಪದ ಗೋಳು

ವಾಹನ ನಿಲುಗಡೆಗೆ ಸೂಕ್ತ ಜಾಗ ಗುರುತಿಸುವಂತ ಸ್ಥಳೀಯ ಆಡಳಿತಕ್ಕೆ ಒತ್ತಾಯ
Published 6 ಏಪ್ರಿಲ್ 2024, 7:37 IST
Last Updated 6 ಏಪ್ರಿಲ್ 2024, 7:37 IST
ಅಕ್ಷರ ಗಾತ್ರ

ಕೊಪ್ಪ: ಪಟ್ಟಣದಲ್ಲಿ ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳಾವಕಾಶವಿಲ್ಲದೆ ಸಾರ್ವಜನಿಕರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಮುಖ್ಯ ರಸ್ತೆಗೆ ಹೊಂದಿಕೊಂಡಂತೆ  ಕೆಲವರು ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡಿರುತ್ತಾರೆ. ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಈ ಸಮಸ್ಯೆ ಕೆಲವು ಕಡೆ ತೀವ್ರತರವಾಗಿದ್ದು, ಮುಂದೆ ಸಾಗಲಾಗದೆ ಮುಖ್ಯ ರಸ್ತೆಯಲ್ಲೇ ಕಾಯಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ.

ರಸ್ತೆಯ ಅಕ್ಕ ಪಕ್ಕದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಲು ದಿನಕ್ಕೊಮ್ಮೆ ಒಂದು ಬದಿ ಎಂದು ನಿಗದಿಪಡಿಸಲಾಗಿತ್ತು. ಆದರೆ, ಈ ನಿಯಮವನ್ನು ಮೀರಿ ನಿತ್ಯ ಎರಡೂ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದು ಸಾಮಾನ್ಯವಾಗಿದೆ. ಕೆಲವರು ವಾಹನಗಳನ್ನು ಇಡೀ ದಿನ ರಸ್ತೆ ‍ಪಕ್ಕ ನಿಲ್ಲಿಸಿ ಶಿವಮೊಗ್ಗ, ಚಿಕ್ಕಮಗಳೂರು ಮುಂತಾದ ಕಡೆಗಳಿಗೆ ಹೋಗಿರುತ್ತಾರೆ, ಅವರು ವಾಪಸ್ ಬರುವವರೆಗೂ,ಉಳಿದ ಸವಾರರು, ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ.

ವಾಹನ ಪಾರ್ಕಿಂಗ್ ಮಾಡಲು ಜಾಗದ ಕೊರತೆಯಿಂದಾಗಿ ಪೊಲೀಸರಿಗೂ ವಾಹಣ ದಟ್ಟಣೆ ನಿರ್ವಹಣೆ ಮಾಡುವುದು ತಲೆನೋವಾಗಿ ಪರಿಣಮಿಸಿದೆ. ಪೊಲೀಸರು ಅಳವಡಿಸಿದ ಬ್ಯಾರಿಕೇಡ್, ನಾಮಫಲಕವನ್ನೂ ಲೆಕ್ಕಿಸದೆ ಕೆಲವೆಡೆ ವಾಹನ ನಿಲ್ಲಿಸುವುದು ನಿರಂತರವಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂತೋಷ್
ಸಂತೋಷ್
ಪಟ್ಟಣದಲ್ಲಿ ವಾಹನ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇದೆ. ಅನಿವಾರ್ಯ ಕಾರಣದಿಂದ ರಸ್ತೆ ಪಕ್ಕದಲ್ಲಿ ವಾಹನ ನಿಲ್ಲಿಸಬೇಕಾಗುತ್ತದೆ. ಪಟ್ಟಣ ಪಂಚಾಯಿತಿ ಈ ಬಗ್ಗೆ ಗಮನ ಹರಿಸಬೇಕು
ಸಂತೋಷ್ ಉದ್ಯಮಿ ಕೊಪ್ಪ.
ದುರ್ಗೇಶ್
ದುರ್ಗೇಶ್
ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು. ಸವಾರರು ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದನ್ನು ತಪ್ಪಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು
ಎಚ್.ಆರ್.ದುರ್ಗೇಶ್ ರಮ್ಯಾ ಸ್ಟುಡಿಯೋ ಮಾಲೀಕ ಅರಳಿಕಟ್ಟೆ ಕೊಪ್ಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT