ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ಷೇತ್ರದ ಅಭಿವೃದ್ಧಿಗೆ ₹ 50 ಕೋಟಿ’

200ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
Last Updated 7 ಆಗಸ್ಟ್ 2022, 7:22 IST
ಅಕ್ಷರ ಗಾತ್ರ

ಬಾಳೆಹೊನ್ನೂರು: ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸರ್ಕಾರ ಲೋಕೋಪಯೋಗಿ ಇಲಾಖೆಗೆ ₹ 13.75 ಕೋಟಿ ಹಾಗೂ ಜಿಲ್ಲಾ ಪಂಚಾಯಿತಿಗೆ ₹12.25 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ಹಿಂದೆ ₹25 ಕೋಟಿ ಬಿಡುಗಡೆಯಾಗಿದ್ದು, ಅಗತ್ಯ ಕಾಮಗಾರಿ ಕೈಗೊಳ್ಳುವಲ್ಲಿ ಶಾಸಕ ಟಿ.ಡಿ.ರಾಜೇಗೌಡ ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಆರೋಪಿಸಿದರು.

ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಬಿಜೆಪಿ ಆಯೋಜಿಸಿದ್ದ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಶಾಸಕರ ಮನೆಯಿಂದ ಕೆಲವೇ ಕಿ.ಮೀ ದೂರದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ಗಿಡ ಕಡಿದು ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ. ಬಾಳೆಗದ್ದೆಯಲ್ಲಿ ಭತ್ತ ನಾಟಿ ಮಾಡಲು ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿದೆ. ಶಾಸಕರು ಏಕೆ ಅದನ್ನು ಪ್ರಶ್ನಿಸುತ್ತಿಲ್ಲ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡ ಕಲ್ಮಕ್ಕಿಯ ಟಿ.ಎಂ.ನಾಗೇಶ್ ಮಾತನಾಡಿ, ‘ ಮೋದಿ ಕಾರ್ಯವೈಖರಿ ಮೆಚ್ಚಿ ಬಿಜೆಪಿ ಸೇರ್ಪಡೆಗೊಂಡಿದ್ದೇನೆ’ ಎಂದರು.

ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ವೆನಿಲ್ಲಾ ಭಾಸ್ಕರ್ ಮಾತನಾಡಿದರು. ಮುಖಂಡ ಟಿ.ಎಂ.ಉಮೇಶ್ ಮಾತನಾಡಿ, ಶಾಸಕರ ಹೋಬಳಿಯಿಂದ 50ಕ್ಕೂ ಅಧಿಕ ಜನ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ನಾಯಕರು ಕಾರ್ಯಕರ್ತರಿಗೆ ಸ್ಪಂದಿಸದಿದ್ದಲ್ಲಿ ಹೀಗೆ ಆಗುತ್ತದೆ ಎಂದರು.

ಮುಖಂಡರಾದ ಬೆಳಸೆ ನಾಗೇಶ್, ಗುತ್ತಿಗೆದಾರ ವೆಂಕಟೇಶ್ ಸೇರಿದಂತೆ 200ಕ್ಕೂ ಅಧಿಕ ಕಾರ್ಯಕರ್ತರು ವಿವಿಧ ಪಕ್ಷಗಳನ್ನು ತ್ಯಜಿಸಿ ಬಿಜೆಪಿ ಸೇರ್ಪಡೆಗೊಂಡರು.

ಅರುಣ್ ಕುಮಾರ್, ಪುಣ್ಯ ಪಾಲ್, ಕವಿತಾ ರೇವಣ್ಣ, ದಿನಕರ್ ಮೇಲ್ಪಾಲ್, ಬಿ.ಜಗದೀಶ್ಚಂದ್ರ, ಪ್ರಭಾಕರ್ ಪ್ರಣಸ್ವಿ, ಹುಯಿಗೆರೆ ವಾಸು, ಅರೇನೂರು ಸಂತೋಷ್, ಕೆ.ಕೆ.ವೆಂಕಟೇಶ್, ಕೋಕಿಲಾ, ಕೆ.ಟಿ.ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT