ಸೀತೂರು (ನರಸಿಂಹರಾಜಪುರ): ತಾಲ್ಲೂಕಿನ 8 ಗ್ರಾಮ ಪಂಚಾಯಿತಿಗಳಿಗೆ ತಲಾ ₹45 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ತಾಲ್ಲೂಕಿನ ಸೀತೂರು ಗ್ರಾಮದಲ್ಲಿ ₹ 54 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಹಾಗೂ ಘನ ತ್ಯಾಜ್ಯ ವಿಲೇವಾರಿ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರೆಗುಂಡಿ- ಹಳ್ಳಿಬೈಲು ರಸ್ತೆ ಅಭಿವೃದ್ಧಿಗೆ ₹4.50 ಕೋಟಿ , ಶೇಡಗಾರು ಪಿಕಪ್ಗೆ ₹34 ಲಕ್ಷ, ಬೆಳ್ಳೂರು ಪಶು ವೈದ್ಯಕೀಯ ಆಸ್ಪತ್ರೆಗೆ ₹34 ಲಕ್ಷ, ಶಾಲೆ- ಅಂಗನವಾಡಿಗೆ ₹25 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಭಾಗದ ಗ್ರಾಮೀಣ ರಸ್ತೆ ಅಭಿವೃದ್ದಿಗೆ ₹75 ಲಕ್ಷ ಮಂಜೂರು ಮಾಡಲಾಗಿದ್ದು ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದರು.

ಕಾಡು ಪ್ರಾಣಿ ಹಾಗೂ ಮನುಷ್ಯರ ನಡುವೆ ಸಂಘರ್ಷದಿಂದ ಶೃಂಗೇರಿ ಕ್ಷೇತ್ರದಲ್ಲಿ 9 ಜನರನ್ನು ಕಳೆದುಕೊಂಡಿದ್ದೇವೆ. ಪ್ರತಿ ಕುಟುಂಬಕ್ಕೂ ₹15 ರಿಂದ 20 ಲಕ್ಷ ಪರಿಹಾರ ನೀಡಲಾಗಿದೆ. ಇಡೀ ರಾಜ್ಯದಲ್ಲಿ ಕಾಡು ಪ್ರಾಣಿಗಳಿಂದಾಗಿ 60 ರಿಂದ 70 ಜನ ಬಲಿಯಾಗಿದ್ದಾರೆ. ಶೃಂಗೇರಿ ಕ್ಷೇತ್ರದಲ್ಲಿ 5 ಉಪಟಳ ನೀಡುತ್ತಿದ್ದ ಆನೆ ಸೆರೆ ಹಿಡಿಯಲಾಗಿದೆ. ಇನ್ನೂ 4 ರಿಂದ 5 ಆನೆಯನ್ನು ಸೆರೆ ಹಿಡಿಯಲಾಗುವುದು ಎಂದರು.

ಜಲ ಜೀವನ್ ಮಿಷನ್ ಯೋಜನೆಯಡಿ ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲ್ಲೂಕಿನ ಜನರಿಗೆ ಕುಡಿಯುವ ನೀರು ಪೂರೈಕೆಗೆ ₹ 60 ಕೋಟಿ ಮಂಜೂರಾಗಿದೆ. ಅಲ್ಲದೇ 3 ತಾಲ್ಲೂಕುಗಳಲ್ಲಿ ಭದ್ರಾ, ತುಂಗಾ ನದಿಯಿಂದ ಶಾಶ್ವತ ಕುಡಿಯುವ ನೀರಿಗಾಗಿ ₹700 ಕೋಟಿ ಮಂಜೂರಾಗಿದೆ. ಈ ಕಾಮಗಾರಿಗಳು ಮುಗಿದರೆ ಮುಂದೆ ಶೃಂಗೇರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ ಎಂದರು.

ಸೀತೂರು ಗ್ರಾಮಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ₹22 ಕೋಟಿ ಹಣ ಮಂಜೂರಾಗಿದೆ. ಆದರೆ, ಜಾಗದ ಸಮಸ್ಯೆಯಿಂದಾಗಿ ಕಾಮಗಾರಿ ನನೆಗುದಿಗೆ ಬಿದ್ದಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಎನ್.ಪಿ.ರಮೇಶ ಪ್ರಾಸ್ತಾವಿಕವಾಗಿ ಮಾತನಾಡಿ, ಈ ಭಾಗದಲ್ಲಿ ಗ್ರಾಮೀಣ ರಸ್ತೆ ಶಿಥಿಲವಾಗಿದೆ. ವಿದ್ಯುತ್ ಸಮಸ್ಯೆ ಇದೆ. 33 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಈ ಭಾಗಕ್ಕೆ ಮಂಜೂರು ಮಾಡಿಸಬೇಕು ಎಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಸದಸ್ಯ ಎಚ್.ಇ.ದಿವಾಕರ್ ಮಾತನಾಡಿದರು.

ಸೀತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಎಸ್.ರೇಖಾ, ಉಪಾಧ್ಯಕ್ಷೆ ಪ್ರೇಮಾ, ಶೃಂಗೇರಿ ಕ್ಷೇತ್ರ ಎಪಿಎಂಸಿ ಅಧ್ಯಕ್ಷ ಎಸ್.ಡಿ.ರಾಜೇಂದ್ರ, ಮಾಜಿ ಮಂಡಲ ಪ್ರಧಾನ ಎಸ್.ಡಿ.ವಿ.ಗೋಪಾಲರಾವ್, ಸೀತೂರು ಸಹಕಾರ ಸಂಘದ ಅಧ್ಯಕ್ಷ ಬೆಮ್ಮನೆ ಮೋಹನ್,ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದೀಪ್, ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್.ಉಪೇಂದ್ರ ರಾವ್, ಎಚ್.ಎಲ್.ವಿಜಯ, ಬಿ.ಆರ್.ಸಿದ್ದಪ್ಪಗೌಡ, ಸುಜಾತಾ, ದಾಮಿನಿ, ಪಿ.ಕವಿತಾ, ತಾಲ್ಲೂಕು ಪಂಚಾಯಿತಿ ಇ.ಒ.ನವೀನ್ ಕುಮಾರ್, ಎಇಇ ಸಾಗರ್, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಮನೀಶ್, ಪಿಡಿಒ ಶ್ರೀನಿವಾಸ್, ಕಾರ್ಯದರ್ಶಿ ನವೀನ್ ಕುಮಾರ್, ಅನಿಲ್ ಕುಮಾರ್ ಇದ್ದರು. ಮುಖಂಡ ಎಸ್.ಡಿ.ವಿ.ಗೋಪಾಲರಾವ್ ಹಾಗೂ ಇತರರನ್ನು ಅಭಿನಂದಿಸಲಾಯಿತು.

ನನ್ನ ಕ್ಷೇತ್ರದ ಜನರಿಗೆ ಕೆಟ್ಟ ಹೆಸರು ತರುವ ಯಾವುದೇ ಕೆಲಸ ಮಾಡಿಲ್ಲ. ನನ್ನ ಮೇಲೆ ವಿರೋಧ ಪಕ್ಷದ ಮುಖಂಡರು ಅಪಪ್ರಚಾರ ಮಾಡಿದರು. ಇದನ್ನು ಯಾರೂ ನಂಬಬಾರದು.
ಟಿ.ಡಿ.ರಾಜೇಗೌಡ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.