ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸೋಂಕಿತೆಗೆ ಸುರಕ್ಷಿತ ಹೆರಿಗೆ

ತಾಲ್ಲೂಕು ಸಾರ್ವಜನಿಕರ ಆಸ್ಪತ್ರೆಯ ವೈದ್ಯೆ ಡಾ.ಚಂದ್ರಪ್ರಭಾ ತಂಡ
Last Updated 17 ಆಗಸ್ಟ್ 2020, 5:41 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಇಲ್ಲಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಶನಿವಾರ ಕೋವಿಡ್ ಸೋಂಕಿತೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

21 ವರ್ಷದ ಗರ್ಭಿಣಿ ಹೆರಿಗೆಗೆ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆಗೂ ಮುನ್ನಾ ಕೋವಿಡ್ ಪರೀಕ್ಷೆ ಮಾಡಿದಾಗ ಸೋಂಕು ಇರುವುದು ದೃಢಪಟ್ಟಿತ್ತು. ಶೀಘ್ರವೇ ಹೆರಿಗೆ ಮಾಡಿಸಬೇಕಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಪಿಪಿಇ ಕಿಟ್ ಧರಿಸಿಕೊಂಡ ಪ್ರಸೂತಿ ತಜ್ಞೆ ಡಾ.ಚಂದ್ರಪ್ರಭಾ ನೇತೃತ್ವದ ತಂಡ ಸಹಜ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದೆ. ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಮಗುವಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ಬಂದಿದೆ. ಹೆರಿಗೆ ಮಾಡಿಸಲು ಡಾ.ಚಂದ್ರಪ್ರಭಾ ಅವರಿಗೆ ಶುಶ್ರೂಷಕಿಯರಾದ ಜಿನು, ಉಷಾ ಹಾಗೂ ಡಿ ದರ್ಜೆ ಸಿಬ್ಬಂದಿ ಲಕ್ಷ್ಮಮ್ಮ ಸಾಥ್ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT