ಚಿಕ್ಕಮಗಳೂರು: ನೀಟ್ನಲ್ಲಿ ಚಿಕ್ಕಮಗಳೂರಿನ ಸಾಯಿ ಏಂಜಲ್ಸ್ ಕಾಲೇಜಿನ ವಿದ್ಯಾರ್ಥಿನಿ ಅಮೃತಾ ಅವರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

ಅಮೃತಾ 567 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದು, ದಿಯಾ-542 ಅಂಕ, ತೇಜಸ್- 496 ಅಂಕ ಗಳಿಸಿದ್ದಾರೆ.

ಎರಡು ವರ್ಷ ವಿದ್ಯಾರ್ಥಿ ನಿಲಯದಲ್ಲೇ ಉಳಿದು ಉಪನ್ಯಾಸಕರ ಮಾರ್ಗದರ್ಶನ ತೆಗೆದುಕೊಂಡಿದ್ದರಿಂದ ಉತ್ತಮ ಫಲಿತಾಂಶ ಪಡೆಯಲು ಸಹಾಯವಾಯಿತು. ನೀಟ್ಗೆ ಬೇರೆಲ್ಲೂ ತರಬೇತಿಗೆ ಪಡೆಯಲಿಲ್ಲ. ನಮ್ಮ ಕಾಲೇಜಿನ ಉಪನ್ಯಾಸಕರು ಉತ್ತಮ ರೀತಿಯಲ್ಲಿ ಹುರಿದುಂಬಿಸಿದ್ದರಿಂದ ಈ ಫಲಿತಾಂಶ ಬಂದಿದೆ ಎಂದು ಅಮೃತಾ ಹೇಳಿದರು.

ಸಾಯಿ ಏಂಜಲ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಕಾಲೇಜಿನಿಂದಲೇ ನೀಟ್ಗೆ ತರಬೇತಿ ನೀಡಲಾಗಿತ್ತು. ಪುನರಾವರ್ತಿತ ವಿದ್ಯಾರ್ಥಿಗಳಿಗೆ ಅವಕಾಶವಿಲ್ಲ. ಹೀಗಾಗಿ ದ್ವಿತೀಯ ಪಿಯು ಪರೀಕ್ಷೆಯ ಜೊತೆಯಲ್ಲೇ ನೀಟ್ಗೂ ತರಬೇತಿ ನೀಡಲಾಗುತ್ತಿದೆ. ಇದರ ಪರಿಣಾಮ ಮೊದಲ ಪ್ರಯತ್ನದಲ್ಲಿಯೇ ಸಾಯಿ ಏಂಜಲ್ಸ್ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮಾಡಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಸಾಯಿ ಏಂಜಲ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಕಾರ್ತಿಕ್ ಎ.ಜೆ. ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.