ಸೋಮವಾರ, ಜನವರಿ 27, 2020
30 °C

ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ: 2ನೇ ದಿನದ ಕಾರ್ಯಕ್ರಮ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavan

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯಲ್ಲಿ ಆಯೋಜಿಸಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನದ ಎರಡನೇ ದಿನ (ಇದೇ 11ರ) ಶನಿವಾರದ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

ಶಾಂತಿ ಕಾಪಾಡುವ ನಿಟ್ಟಿನಲ್ಲಿ, ಗೊಂದಲ ಅಹಿತಕರ ಘಟನೆಗಳಿಗೆ ಎಡೆಯಾಗಬಾರದು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮಿತಿ ಸದಸ್ಯರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಬಾಕಿ ಇರುವ ಸನ್ಮಾನ ಕಾರ್ಯಕ್ರಮವನ್ನು ಇನ್ನೊಂದು ದಿನ ಮಾಡುವುದಾಗಿ ಆಯೋಜಕರು ತಿಳಿಸಿದ್ದಾರೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ ಪಾಂಡೆ ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು