ಚಿಕ್ಕಮಗಳೂರು: ವಿಧಾನಸೌಧದಲ್ಲಿ ಈಚೆಗೆ ನಡೆದ ರಾಜ್ಯಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಶೃಂಗೇರಿಯ ಜೆ.ಸಿ.ಎಂ.ಬಿ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಇಶಾನಾ ದ್ವಿತೀಯ ಸ್ಥಾನ ಪಡೆದಿದ್ದು, ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯುವ ಸಂಸತ್ತು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇಶಾನಾ, ಕೆ.ವೆಂಕಟೇಶಮೂರ್ತಿ ಹಾಗೂ ಶುಭಲಕ್ಷ್ಮಿ ದಂಪತಿಯ ಪುತ್ರ.

ಇದೇ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಗರದ ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ.ಎಲ್.ಜ್ಯೋತಿ ಸಮಾಧಾನಕರ ಬಹುಮಾನಕ್ಕೆ ಪಾತ್ರರಾಗಿದ್ದಾರೆ. ಇವರು, ಲೋಕೇಶಪ್ಪ ಹಾಗೂ ಲಲಿತಮ್ಮ ಅವರ ಪುತ್ರಿ.

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಇದಕ್ಕೂ ಮೊದಲು ನಡೆದ ಜಿಲ್ಲಾ ಮಟ್ಟದ ಈ ಸ್ಪರ್ಧೆಯಲ್ಲಿ ಇವರಿಬ್ಬರೂ ವಿಜೇತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.