ಆಲ್ದೂರು: ಸಮೀಪದ ಸತ್ತಿಹಳ್ಳಿ ಪಂಚಾಯಿತಿಯ ನೂತನ ಅಧ್ಯಕ್ಷ ಧ್ರುವ ಕುಮಾರ್ ಅವರು, ಹಾಂದಿ ಆಟೊ ವೃತ್ತದ ಬಳಿ, ಪಂಚಾಯಿತಿ ಮುಂಭಾಗದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿದ್ದ ದೊಡ್ಡ ದೊಡ್ಡ ಗುಂಡಿಗಳನ್ನು ಸ್ವಂತ ಖರ್ಚಿನಿಂದ ಜಲ್ಲಿ ಪುಡಿ ಹಾಕಿಸಿ ಸರಿಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಧ್ರುವ ಕುಮಾರ್, ಸಾಕಷ್ಟು ಬಾರಿ ಸಮೀಪದ ಹೆದ್ದಾರಿ ರಸ್ತೆಯ ಗುಂಡಿಗಳಿಂದ ಅಪಘಾತಗಳಾಗಿದ್ದು, ಜನಸಾಮಾನ್ಯರು ಯಾವಾಗಲೂ ತೊಂದರೆ ಅನುಭವಿಸುತ್ತಿರುತ್ತಾರೆ. ಆದ್ದರಿಂದ ವಾಹನ ಸವಾರರಿಗೆ ಅನುಕೂಲವಾಗಲೆಂದು ಸ್ವಂತ ಖರ್ಚಿನಲ್ಲಿ ಗುಂಡಿಗಳನ್ನು ಮುಚ್ಚಿಸಿರುವುದಾಗಿ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.