ಮಹಾತ್ಮರು, ದಾರ್ಶನಿಕರ ಆದರ್ಶ ಪಾಲಿಸಲು ಸಲಹೆ

ಶನಿವಾರ, ಜೂಲೈ 20, 2019
25 °C

ಮಹಾತ್ಮರು, ದಾರ್ಶನಿಕರ ಆದರ್ಶ ಪಾಲಿಸಲು ಸಲಹೆ

Published:
Updated:
Prajavani

ಚಿಕ್ಕಮಗಳೂರು: ಡಾ.ಬಿ.ಆರ್.ಅಂಬೇಡ್ಕರ್, ಬುದ್ಧ , ಬಸವಣ್ಣ ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಿ.ಶಿವಶಂಕರ್ ಸಲಹೆ ನೀಡಿದರು.

ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್, ಬುದ್ಧ, ಬಸವಣ್ಣ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

ದಾರ್ಶನಿಕರು, ಮಹಾತ್ಮರ ಚಿಂತನೆಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಸಮಾಜ ಸುಧಾರಣೆಯಾಗುತ್ತದೆ, ಸಮಾನತೆ ದೊರೆಯುತ್ತದೆ ಎಂದರು.

ಪ್ರೊ.ಬಾಸ್ಕರ್‌ವಿಟ್ಲ ಮಾತನಾಡಿ, ಶೋಷಿತ ವರ್ಗದವರು ಸಂಘಟಿತರಾಗಬೇಕು. ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ವಿಜಯಕುಮಾರ್, ಉಪಾಧ್ಯಕ್ಷರಾದ ಮೋಹನ್, ದೇವಿರಮ್ಮ, ಡಾ.ಬಾಲಕೃಷ್ಣ, ರಾಜಣ್ಣ, ಕಾಂಚನ ದೊಡ್ಡಮನಿ, ಜಿಲ್ಲಾಧ್ಯಕ್ಷ ಲೋಕೇಶಪ್ಪ, ಪ್ರಧಾನ ಕಾರ್ಯದರ್ಶಿ ನಾಗೇಶ್, ಖಜಾಂಚಿ ರವಿಕುಮಾರ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !