ಮೂಡಿಗೆರೆ: ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆಯಾಗುತ್ತವೆ ಎಂದು ಫಲ್ಗುಣಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಕಸ್ತೂರಮ್ಮ ಹೇಳಿದರು.

ಬಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

‘ಸಂಸ್ಕೃತಿ, ಸಾಂಸ್ಕೃತಿಕ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವಲ್ಲಿ ಇಂತಹ ಹೊಸತನದ ಅಗತ್ಯವಿರುತ್ತದೆ. ಸರ್ಕಾರಿ ಶಾಲೆಗಳನ್ನು ಉಳಿಸುವಲ್ಲಿ ಪೋಷಕರು ಹಾಗೂ ಸಾರ್ವಜನಿಕರು ಮುತುವರ್ಜಿ ವಹಿಸಿದರೆ, ಶಾಲೆಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ’ ಎಂದರು.

ಶಾಲಾ ಸಮಿತಿ ಅಧ್ಯಕ್ಷ ದಿನೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ವಾರ್ಷಿಕೋತ್ಸವವು ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸುವ, ಸಾಧನೆಗಳನ್ನು ಗುರುತಿಸುವ ಹಾಗೂ ಪೋಷಕರು-ಶಿಕ್ಷಕರ ಬಾಂಧವ್ಯವನ್ನು ಬಲಪಡಿಸುವ ಒಂದು ಸಂಭ್ರಮದ ಹಬ್ಬವಾಗಿದೆ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊದಲ ಬಾರಿಗೆ ಶಾಲಾ ವಾರ್ಷಿಕೋತ್ಸವ ಆಚರಿಸಿರುವುದು ಖುಷಿ ಕೊಟ್ಟಿದೆ’ ಎಂದರು.

ಫಲ್ಗುಣಿ ಗ್ರಾ.ಪಂ. ಉಪಾಧ್ಯಕ್ಷೆ ಸರಿತಾ ಲೋಹಿತ್, ಸದಸ್ಯರಾದ ಕೋಮಲ ಶಿವಣ್ಣ, ನೇತ್ರಾ ಹರೀಶ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ದೇವಾಡಿಗ, ಪುಟ್ಟರಾಜು, ಬಿ.ಆರ್. ನವೀನ್, ಸಿಆರ್ಪಿ ಶಿವಕುಮಾರ್, ಶೋಭಾ, ಮುಖ್ಯ ಶಿಕ್ಷಕಿ ಇಂಪಾಸವಿನ, ದೀಪಾ, ಸುರೇಶ್, ಹುಸೇನ್, ಅರ್ಪತ್, ಚಂದ್ರಶೇಖರ್, ರಾಕೇಶ್, ಶಾಲಾ ಸಮಿತಿ ಉಪಾಧ್ಯಕ್ಷೆ ತೇಜಸ್ವಿನಿ ಪ್ರಸಾದ್, ಪ್ರತಾಪ್ ಗೌಡ, ಶಿವಣ್ಣಗೌಡ, ಬಿಂದುಸಾರ, ಶಿಕ್ಷಕರಾದ ಜಯಕುಮಾರ್ ಆಚಾರ್, ಕಾಂತರಾಜ್, ಶ್ವೇತ ಅಶೋಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.