ಶನಿವಾರ, ಸೆಪ್ಟೆಂಬರ್ 18, 2021
24 °C
ಅಪ್ಪನಿಂದಲೇ ಕೃತ್ಯ; ಪೊಲೀಸರ ಶಂಕೆ

ಗುಂಡೇಟು: ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಗ್ರಾಮದ ಕಿರಣ್‌ (32) ಗುಂಡೇಟಿನಿಂದ ಬುಧವಾರ ಸಾವಿಗೀಡಾಗಿದ್ದಾರೆ. ಕಿರಣ್‌ ಅವರ ಅಪ್ಪ ಲಕ್ಷ್ಮಣ (72) ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಲಕ್ಷ್ಮಣ ಅವರನ್ನು ಬಂಧಿಸಲಾಗಿದೆ. ಮನೆಯಲ್ಲಿದ್ದ ಎಸ್‌ಬಿಎಲ್‌ ಬಂದೂಕಿನಿಂದ ಕೃತ್ಯ ಎಸಗಿರಬಹುದು ಎಂಬ ಶಂಕೆ ಇದೆ. ಕೌಟುಂಬಿಕ ಕಲಹದಿಂದ ಕೃತ್ಯ ಎಸಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಿರಣ್‌ ಮನೆಯೊಳಗೆ ರಾತ್ರಿ 8.30ರ ಸುಮಾರಿಗೆ ಗುಂಡಿನ ಸದ್ದು ಕೇಳಿಸಿದೆ. ತಕ್ಷಣವೇ ಅ‍ಕ್ಕಪಕ್ಕದ ಮನೆಯವರು ಹೋಗಿ ನೋಡಿದಾಗ ಅನಾಹುತ ಗೊತ್ತಾಗಿದೆ.

ಗೋಣಿಬೀಡು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.