ಗುರುವಾರ , ಡಿಸೆಂಬರ್ 8, 2022
18 °C
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹೇಮಂತ್‌ ಕುಮಾರ್‌ ಆಯ್ಕೆ

ಶ್ರೀಗುರುದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ/ಪೀಠ: ಹೇಮಂತ್‌ ಕುಮಾರ್‌ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಚಿಕ್ಕಮಗಳೂರು: ತಾಲ್ಲೂಕಿನ ಶ್ರೀಗುರುದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ/ಪೀಠದ ಸಂಯುಕ್ತ ಸಂಸ್ಥೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಿ.ಎಚ್‌. ಹೇಮಂತಕುಮಾರ್‌ ಆಯ್ಕೆಯಾಗಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದೆ. ಅವಿರೋಧವಾಗಿ ಆಯ್ಕೆ ನಡೆದಿದೆ. ಸಮಿತಿಯ ಎಂಟು ಸದಸ್ಯರ ಪೈಕಿ ಏಳು ಮಂದಿ ಸಭೆಯಲ್ಲಿ ಹಾಜರಾಗಿದ್ದರು. 

‘ಸಮಿತಿಯ ಮುಸ್ಲಿಂ ಸದಸ್ಯ ಎಸ್‌.ಎಂ.ಭಾಷಾ ಅವರು ಸಭೆಗೆ ಗೈರು ಹಾಜರಾಗಿದ್ದರು. ಸಮಿತಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ಆಯಕ್ತರು ಅನುಮೋದನೆ ನೀಡಿದ್ದಾರೆ’ ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಶ್ರೀಗುರುದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ/ಪೀಠದ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್‌, ಧಾರ್ಮಿಕ ದತ್ತಿ ಇಲಾಖೆ ತಹಶೀಲ್ದಾರ್‌ ಯೋಗೀಶ್‌ ಇದ್ದರು.

ರಾಜ್ಯ ಸರ್ಕಾರವು ಇದೇ 18ರಂದು ವ್ಯವಸ್ಥಾಪನಾ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು. ಸಭೆ ನಡೆಸಿ ಒಬ್ಬರನ್ನು ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ನಡವಳಿ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಲಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು