ಕೊಪ್ಪ: ಬಾಳಗಡಿಯಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಜೂನ್ 8ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪಿ. ಅಂಶುಮಂತ್, ವಿಧಾನ ಪರಿಷತ್ ಸದಸ್ಯೆ ಆರತಿಕೃಷ್ಣ, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಶಾಸಕ ಟಿ.ಡಿ. ರಾಜೇಗೌಡ, ಗಾಯತ್ರಿ ಶಾಂತೇಗೌಡ ಸಭೆಯಲ್ಲಿ ಪಾಲ್ಗೋಳಲಿದ್ದಾರೆ ಎಂದರು.

ಬಿಜೆಪಿ ಮುಖಂಡ ಡಿ.ಎನ್. ಜೀವರಾಜ್ ಅವರು ತಮ್ಮ ಲಾಭಕ್ಕಾಗಿ ಅಡ್ಡ ದಾರಿಯ ಮೂಲಕ ಮತ ತಿದ್ದುಪಡಿ ಮಾಡಿಸಿದ್ದಾರೆ. 2023ರಲ್ಲಿ ಮತ ಎಣಿಕೆ ದಿನ ಮತಪತ್ರಗಳನ್ನು ಎಲ್ಲಾ ಪಕ್ಷದ ಚುನಾವಣಾ ಏಜೆಂಟ್ಗಳಿಗೆ ತೋರಿಸಿಯೇ ಎಣಿಕೆ ಮಾಡಿರುತ್ತಾರೆ. ಆಗ ಇಲ್ಲದ ಅನುಮಾನ ಈಗ ವ್ಯಕ್ತವಾಗುತ್ತಿರುವುದು ಏಕೆ? ಎಂದು ಪ್ರಶ್ನಿಸಿದರು.

ಎನ್.ಆರ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರುಬೈಲ್ ನಟರಾಜ್, ಕೊಪ್ಪ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನುಗ್ಗಿ ಮಂಜುನಾಥ್, ಉಪಾಧ್ಯಕ್ಷ ಜೇಸುದಾಸ್, ಸಂತೋಷ್ ಕುಲಾಸೊ, ಮೆಗುಂದ ಹೋಬಳಿ ಅಧ್ಯಕ್ಷ ಪ್ರವೀಣ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್, ಕೆಡಿಪಿ ಸದಸ್ಯ ರಾಜಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯನಂದ, ಮುಖಂಡರಾದ ಹರೀಶ್ ಅಮೀನ್, ಆನಂದ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-126-2091701806

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.