ಶೃಂಗೇರಿ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ನಿರ್ದೇಶಕ ಸ್ಥಾನಕ್ಕೆ ಶುಕ್ರವಾರ ರೈತ ಭವನದಲ್ಲಿ ನಡೆದ ಚುನಾವಣೆಯಲ್ಲಿ ಅರ್ಹ ಷೇರುದಾರರು ಮತದಾನ ಮಾಡಿದರು.

ಸಂಘದಲ್ಲಿ 14 ಜನ ನಿರ್ದೇಶಕರ ಸ್ಥಾನವಿದ್ದು, 3 ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ನಡೆದಿದೆ. 11 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 23 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು. ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಒಟ್ಟು 682 ಮತದಾರರು ಇದ್ದು, ಇದರಲ್ಲಿ 652 ಮತದಾರರು ಮತ ಚಲಾಯಿಸುವ ಮೂಲಕ ಶೇ 95ರಷ್ಟು ಮತದಾನ ನಡೆದಿದೆ. ತಾಲ್ಲೂಕಿನ 9 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ ಮತದಾರರನ್ನು ಭೇಟಿಯಾಗಿ ಮತ ಯಾಚಿಸುವುದೇ ಅಭ್ಯರ್ಥಿಗಳಿಗೆ ಸವಾಲು ಆಗಿತ್ತು. ಎರಡು ತಂಡಗಳಾಗಿ ಚುನಾವಣೆ ಎದುರಿಸಿದ ಗುಂಪು ಅಲ್ಲದೇ ಭಾನುಪ್ರಕಾಶ್ ಅವರು ಏಕಾಂಗಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

ಬೆಳಿಗ್ಗೆ 9ಕ್ಕೆ ಆರಂಭವಾದ ಮತದಾನ ಮಧ್ಯಾಹ್ನ 4ರವರೆಗೂ ನಡೆದಿದ್ದು, ಗ್ರಾಮೀಣ ಪ್ರದೇಶದಲ್ಲಿದ್ದ ಮತದಾರರನ್ನು ಕರೆ ತರುವ ಕಾಯಕ ಕೊನೆಯವರೆಗೂ ನಡೆಯಿತು. ಬೆಂಗಳೂರು ಮತ್ತಿತರ ಕಡೆಯಿಂದ ಬಂದು ಕೆಲ ಮತದಾರರು ಮತ ಚಲಾಯಿಸಿದರು.

ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ರೈತ ಭವನದಲ್ಲಿ ಮತದಾನ ನಡೆದಿದ್ದು, ರಾಜಕೀಯ ಪಕ್ಷಗಳು ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿ, ರಾಜಕೀಯ ಮುಖಂಡರು ಮತದಾನ ಕೇಂದ್ರದ ಬಳಿ ಜಮಾಯಿಸಿದ್ದರು. 2020-21ನೇ ಸಾಲಿನಲ್ಲಿ ಅಭ್ಯರ್ಥಿಗಳು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ನಡೆದಿರಲಿಲ್ಲ. ಈಗ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ. ಕಳೆದ 5 ಬಾರಿ ಚುನಾವಣೆಗೆ ಸ್ಪರ್ಧಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಎಚ್.ಕೆ. ನವೀನ್ ಹಾಗೂ ಮಾಜಿ ಅಧ್ಯಕ್ಷ ಕೆ.ಎಸ್. ರಮೇಶ್ ಮತ್ತೆ ಚುನಾವಣಾ ಕಣದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ತ್ರಿಮೂರ್ತಿ, ಭಾನುಪ್ರಕಾಶ್, ಲಕ್ಷ್ಮೀಶ ಕಣದಲ್ಲಿದ್ದಾರೆ.

ತಹಶೀಲ್ದಾರ್ ಅನೂಪ್ ಸಂಜೋಗ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮತದಾನಕ್ಕೆ 2 ಭೂತ್ಗಳನ್ನು ನಿರ್ಮಿಸಿ 6 ವಿಭಾಗಗಳಾಗಿ ಮಾಡಿದ್ದರು. ನೂಕುನುಗ್ಗಲು ಆಗದಂತೆ ಒಂದೇ ಸಮಯದಲ್ಲಿ 6 ಜನ ಮತ ಚಲಾಯಿಸುವಂತೆ ಕ್ರಮ ಕೈಗೊಳ್ಳಲಾಗಿತ್ತು. ಮತದಾನ ಮುಗಿದ ನಂತರ ರೈತ ಭವನದಲ್ಲಿ ಮತ ಎಣಿಕೆ ನಡೆಯಿತು. ಫಲಿತಾಂಶ ತಡ ರಾತ್ರಿಯಾಗಿ ಹೊರಬೀಳಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-126-238890381

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.