ಶೃಂಗೇರಿ: ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮನುಷ್ಯರ ನಡುವಿನ ಸಂಬಂಧಗಳ ಆಪ್ತತೆ ಮರೆಯಾಗುತ್ತಿದೆ. ಜಾತಿ-ಮತಗಳ ಭೇದ ಮರೆತು ಸೌಹಾರ್ದ ನೆಲೆಗಟ್ಟಿನಲ್ಲಿ ನಾವು ಬದುಕು ಕಟ್ಟಿಕೊಳ್ಳಬೇಕಿದೆ’ ಎಂದು ಜಾನಪದ ಅಕಾಡೆಮಿ ಸದಸ್ಯ ಜೀವನಸಾಬ್ ವಾಲಿಕಾರ ಬಿನ್ನಾಳ ಹೇಳಿದರು.

ಇಲ್ಲಿನ ಬಿಜಿಎಸ್ ಬಿಇಡಿ ಪಿ.ಯು. ಕಾಲೇಜು ಸಭಾಂಗಣದಲ್ಲಿಗೋಣಿಬೀಡು ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯ ಆಯೋಜಿಸಿದ ಆರನೇ ಜ್ಞಾನಪುಷ್ಪ ಕಾರ್ಯಕ್ರಮ ಮಾಲಿಕೆಯಲ್ಲಿ ‘ಜಾನಪದ ಸಾಹಿತ್ಯದಲ್ಲಿ ಸೌಹಾರ್ದದ ನೆಲೆಗಳು’ ಕುರಿತು ಅವರು ಉಪನ್ಯಾಸ ನೀಡಿದರು.

‘ಜನಪದರು ಪದಗಳನ್ನು ಕಟ್ಟಿ ಸಾಂಸ್ಕೃತಿಕ ಮೆರುಗನ್ನು ಬೆಳೆಸಿದವರು. ಅವರಿಗೆ ಅಕ್ಷರ ಜ್ಞಾನ ಇಲ್ಲದಿದ್ದರೂ ವಿವೇಕ, ವಿವೇಚನೆಗಳಿದ್ದವು. ಬದುಕಿನ ಮೌಲ್ಯಗಳ ಅರಿವಿತ್ತು. ಅಕ್ಷರ ಕಲಿಯದಿದ್ದರೂ ವಿವೇಕತನದಿಂದ ಬಾಳಿದವರು’ ಎಂದರು.

ಪುಪ್ಪಗಿರಿ ಪ್ರತಿಷ್ಠಾನದ ಸಂಸ್ಥಾಪಕ ಮೋಹನ್ ರಾಜಣ್ಣ ಮಾತನಾಡಿ, ‘ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಯುವಪೀಳಿಗೆ ತಿಳಿಸಿಕೊಡಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಜಾತಿ, ಧರ್ಮವನ್ನು ಬದಿಗಿಟ್ಟು ಮನಸ್ಸುಗಳನ್ನು ಒಂದುಗೂಡಿಸುವ ಕಾರ್ಯಕ್ಕೆ ಸರ್ವರೂ ಕೈಜೋಡಿಸಬೇಕು’ ಎಂದರು.

ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಅಂಗುರ್ಡಿ ದಿನೇಶ್, ಬಿಜಿಎಸ್ ಕಾಲೇಜಿನ ಪ್ರಾಚಾರ್ಯ ನಾಗೇಶ್ ಕೆ.ಸಿ, ದರ್ಶಿನಿ ಪ್ರೌಢಶಾಲೆ ಮುಖ್ಯಶಿಕ್ಷಕ ಕಿರಣ್ ಕುಮಾರ್, ಆನಂದಸ್ವಾಮಿ, ಬಿ. ಶಿವಶಂಕರ್, ಅನುಶ್ರೀ, ಮೇಘ, ಸತ್ಯನಾರಾಯಣ್, ಉಮಾ ಮೋಹನ್, ಕಾರ್ಮಿಕ ಮಿತ್ರ ಬಳಗ ಅಧ್ಯಕ್ಷ ರಮೇಶ್ ಶೂನ್ಯ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಸುಮಂಗಲಿ ಆನಂದಸ್ವಾಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-126-1896393026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.