ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಸಾಹಿತ್ಯ ಸಮ್ಮೇಳನ ಮಾ. 4ರಿಂದ

ಸಮ್ಮೇಳನದ ಅಧ್ಯಕ್ಷ: ವಾಗೀಶ್ವರಿ ಶಿವರಾಮ್ ಅವರನ್ನು ಆಯ್ಕೆ ಮಾಡಿದ ಸಮಿತಿ
Last Updated 8 ಫೆಬ್ರುವರಿ 2023, 7:18 IST
ಅಕ್ಷರ ಗಾತ್ರ

ಶೃಂಗೇರಿ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ 5ನೇ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ಮಾ.4 ಹಾಗೂ 5ರಂದು ಶೃಂಗೇರಿ ಜ್ಞಾನ ಭಾರತಿ ವಿದ್ಯಾಕೇಂದ್ರದಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್ ಸುಬ್ರಹ್ಮಣ್ಯ ಹೇಳಿದರು.

ಶೃಂಗೇರಿ ಕನ್ನಡ ಭವನದಲ್ಲಿ ಸೋಮವಾರ 5ನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಹಾಗೂ ಹಿರಿತನವನ್ನು ಗುರುತಿಸಿ ಶೃಂಗೇರಿ ಮೂಲದ ಪ್ರಸ್ತುತ ಮಂಗಳೂರಿನಲ್ಲಿರುವ ನಿವೃತ್ತ ಸಂಸ್ಕೃತ ಭಾಷಾ ಸಹಾಯಕ ಡಾ.ವಾಗೀಶ್ವರಿ ಶಿವರಾಮ್ ಅವರನ್ನು ಸಮ್ಮೇಳನದ ಅಧ್ಯಕ್ಷರಾಗಿ ಕಾರ್ಯಕಾರಿ ಮಂಡಳಿ ಆಯ್ಕೆ ಮಾಡಿದೆ. ಎರಡು ದಿನಗಳ ಕಾಲ 4 ಗೋಷ್ಠಿಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಕೃಷಿ, ಕಾವ್ಯ ಹಾಗೂ ಸಾಹಿತ್ಯದ ಚಿಂತನೆಗಳ ಉಪನ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮೂರು ದಶಕಗಳಿಂದ ಕನ್ನಡ ಭಾಷೆ, ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಗ್ರಾಮೀಣ ಭಾಗದಲ್ಲಿ ಸಾಹಿತ್ಯ ಕಂಪನ್ನು ಹರಿಸಿ ಉದಯೋನ್ಮುಖ ಕವಿ, ಸಾಹಿತಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತ ಬಂದಿದೆ ಎಂದರು.

ಪ್ರಧಾನ ಕಾರ್ಯದರ್ಶಿಗಳಾದ ಸುನೀತಾ ನವೀನ್ ಗೌಡ, ಹೆಗ್ಗದ್ದೆ ಶಿವಾನಂದ ರಾವ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಪ್ರಧಾನ ಸಂಚಾಲಕ ಡಾ.ಆಗುಂಬೆ ಗಣೇಶ್ ಹೆಗ್ಡೆ, ಕೋಶಾಧ್ಯಕ್ಷ ವಿವೇಕ್ ಬೇಗಾನೆ, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಸುಮಂಗಲಿ ಅನಂದಸ್ವಾಮಿ, ಮಾಜಿ ಅಧ್ಯಕ್ಷ ಗೋಪಾಲ್ ಹೆಗ್ಡೆ, ಹೋಬಳಿ ಘಟಕ ಅಧ್ಯಕ್ಷ ದಿನೇಶ್ ಅಂಗುರ್ಡಿ, ಪದಾಧಿಕಾರಿಗಳಾದ ಕೆ.ಎಂ.ಗೋಪಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT