ಶೃಂಗೇರಿ: ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಶೃಂಗೇರಿ ಕ್ಷೇತ್ರದ 15 ಸಾವಿರ ಮತದಾರರನ್ನು ಕೈಬಿಟ್ಟಿರುವುದರಿಂದ ಕ್ಷೇತ್ರದ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಅನಿಲ್ ಹೊಸಕೊಪ್ಪ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಪಶ್ಚಿಮ ಬಂಗಾಳದಲ್ಲಿ ಒಂದು ಕೋಟಿಗೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟಿರುವ ಪರಿಸ್ಥಿತಿ ನಮ್ಮ ಕ್ಷೇತ್ರದಲ್ಲೂ ಎದುರಾಗುವ ಆತಂಕವಿದೆ. ಆದ್ದರಿಂದ ಶೃಂಗೇರಿ ಕ್ಷೇತ್ರದಲ್ಲಿ ಮತ ಚೋರಿ ಆರಂಭವಾಗುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಸುಮಾರು 1.32 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿದ್ದು, ರಾಜ್ಯದಲ್ಲಿ 70 ಲಕ್ಷ ಮತದಾರರು ಮ್ಯಾಪಿಂಗ್ನಿಂದ ಹೊರಗುಳಿದಿರುವುದು ಅನುಮಾನಕ್ಕೆ ಕಾರಣವಾಗಿದೆ. ಒಮ್ಮೆ ಮ್ಯಾಪಿಂಗ್ನಿಂದ ಹೊರಗುಳಿದರೆ, ಅಗತ್ಯ ದಾಖಲೆಗಳನ್ನು ನೀಡಿದ ಬಳಿಕವೇ ಮತದಾರರ ಪಟ್ಟಿಗೆ ಮರು ಸೇರ್ಪಡೆ ಸಾಧ್ಯ. ಆದರೆ, ಇದು ಅಷ್ಟು ಸುಲಭದ ಪ್ರಕ್ರಿಯೆಯಲ್ಲ. ಹೀಗಾಗಿ ಜನರು ಈ ವಿಚಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದ್ದಾರೆ.

ಮತದಾರರ ಪಟ್ಟಿಯ ಮ್ಯಾಪಿಂಗ್ (ಕಂಪ್ಯೂಟರ್ ಮೂಲಕ ದತ್ತಾಂಶ ಗುರುತಿಸುವಿಕೆ) ಬಳಿಕ ಎಸ್ಐಆರ್ (ವಿಶೇಷ ಸಮಗ್ರ ಪರಿಷ್ಕರಣೆ) ಪರಿಶೀಲನೆ ನಡೆಯುತ್ತದೆ. ಮ್ಯಾಪಿಂಗ್ನಲ್ಲಿ ಉಳಿದಿರುವವರೂ ದಾಖಲಾತಿ ನೀಡಬೇಕಾಗುತ್ತದೆ. ವ್ಯಕ್ತಿಯ ಹೆಸರಿನಲ್ಲಿ ಅಕ್ಷರದ ತಪ್ಪಿದ್ದರೂ ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯಾ ನಂತರ ಭಾರತದಲ್ಲಿ ನಾಲ್ಕು ಬಾರಿ ಎಸ್ಐಆರ್ ಪ್ರಕ್ರಿಯೆ ನಡೆದಿದೆ. ಈ ಹಿಂದೆ ಅದರ ಉದ್ದೇಶ ಮತದಾರರ ಪಟ್ಟಿಯಿಂದ ಹೊರಗುಳಿದವರನ್ನು ಸೇರಿಸುವುದು ಹಾಗೂ ಹೆಚ್ಚಿನ ಪ್ರಜೆಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದಾಗಿತ್ತು. ಆದರೆ ಈಗ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟು ಮತಗಳನ್ನು ಕಡಿಮೆ ಮಾಡುವ ಮೂಲಕ ಚುನಾವಣೆ ಗೆಲ್ಲುವ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಮುಖ್ಯಸ್ಥರಾಗಿದ್ದವರನ್ನೇ ಪ್ರಸ್ತುತ ಮುಖ್ಯಮಂತ್ರಿ ಸಲಹೆಗಾರರನ್ನಾಗಿ ಮಾಡಿರುವುದು ಕಣ್ಣೆದುರಿನ ಉದಾಹರಣೆ. ಪ್ರತಿಯೊಬ್ಬ ಮತದಾರನೂ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಬಿಎಲ್ಒಗಳ ಜವಾಬ್ದಾರಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-126-411942325

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.