ಶೃಂಗೇರಿ: ‘ವ್ಯಕ್ತಿತ್ವ ಗುರುತಿಸಿ ವಿದ್ಯೆ ನೀಡಿ ಜೀವನ ಮಾಡಲು ಕಲಿಸುವವರು ಗುರುಗಳು. ಮಕ್ಕಳ ಜೀವನ ಶೈಲಿಯಲ್ಲಿ ಬದಲಾವಣೆ ತರುವ ಚಾತುರ್ಯ ಶಿಕ್ಷಕರಿಗೆ ಇದೆ. ಈ ಹಿನ್ನೆಲೆಯಲ್ಲಿ ಉತ್ತಮ ಗುರು ಮತ್ತು ಸರಿಯಾದ ಗುರಿ ಇದ್ದರೆ ಜೀವನದಲ್ಲಿ ಯಶಸ್ಸು ಸಾಧ್ಯ’ ಎಂದು ಶಾಸಕ ಟಿ.ಡಿ.ರಾಜೇಗೌಡ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ಶಾರದಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ತಾಲ್ಲೂಕು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದ್ದು ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನದಿಂದಾಗಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹೆಚ್ಚು ಸಾಧನೆ ಆಗಿದೆ' ಎಂದು ಅವರು ಹೇಳಿದರು.

ರಾಜೀವ್ ವೈ.ಆರ್. ಸಂಪನ್ಮೂಲ ವ್ಯಕ್ತಿಯಾಗಿದ್ದರು. ನಿವೃತ್ತ ಶಿಕ್ಷಕರಾದ ಭಾಸ್ಕರ್ ಎಂ.ಆರ್, ಸತ್ಯನಾರಾಯಣ್ ಟಿ.ಎಸ್, ವಿ.ಮಂಜುಳಾ ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ 625 ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತ ರಾಯಪ್ಪ, ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನೀತಾ ವಾಸು, ಉಪಾಧ್ಯಕ್ಷೆ ರಾಧಿಕಾ, ಮಮತಾ ಉದಯ್, ತಹಶೀಲ್ದಾರ್ ಗೌರಮ್ಮ ಪಿ, ಇಓ ಜಯರಾಮ್, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ರಾಘವೇಂದ್ರ, ವಿಜಯ್ ಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯರಾದ ಲತಾ, ರೂಪಾ ಪೈ, ಆಶಾ ದಿನೇಶ್, ರಫಿಕ್ ಅಹಮದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.