ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿದ್ದರಾಮ ರತ್ನ’ ಪ್ರಶಸ್ತಿ ಪ್ರದಾನ

Last Updated 5 ಜುಲೈ 2022, 5:00 IST
ಅಕ್ಷರ ಗಾತ್ರ

ಅಜ್ಜಂಪುರ: ‘ಜಾನಪದ ಕಲೆಯನ್ನು ಉಳಿಸುವ, ಬೆಳೆಸುವ, ಮುಂದುವರಿಸುವ ಅಗತ್ಯವಿದೆ’ ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ಪಟ್ಟಣದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಜಿಲ್ಲಾ ಜಾನಪದ ಕಲಾವಿದರ ಸಂಘದವರು ನೀಡಿದ ‘ಸಿದ್ದರಾಮ ರತ್ನ’ ಪ್ರಶಸ್ತಿ ಸ್ವೀಕರಿಸಿ, ಅವರು ಮಾತನಾಡಿದರು.

ವೀರಗಾಸೆಯ ಕಲಾವಿದ ಮಾಳೇನಹಳ್ಳಿ ಬಸಪ್ಪ ಅವರ ಜೀವನ ಸಾಧನೆ ಕುರಿತ ಸಾಕ್ಷ್ಯ ಚಿತ್ರ ತಯಾರಿಕೆಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಅರ್ಹ ಕಲಾವಿದರಿಗೆ ಮಾಸಾಶನ ದೊರಕಿಸಿಕೊಡಲಾಗುವುದು ಎಂದರು.

ಜಿಲ್ಲಾ ಜಾನಪದ ಕಲಾವಿದರ ಒಕ್ಕೂಟದ ಮುಖಂಡ ಸಿ. ರಂಗಸ್ವಾಮಿ ಮಾತನಾಡಿದರು.

ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಲ್.ನಾಗರತ್ನಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಕೃಷ್ಣಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ಕನ್ನಡ ಶ್ರೀ ಬಿ.ಎಸ್. ಭಗವಾನ್, ಜಾನಪದ ಸಾಹಿತಿ ಚಟ್ನಳ್ಳಿ ಮಹೇಶ್, ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ.ಸುರೇಶ್ ಮಾತನಾಡಿದರು.

ಅರಿವು ವೇದಿಕೆ ಕೆ.ಎಸ್. ಶಿವಣ್ಣ, ಹಂಪನಹಳ್ಳಿ ತಿಮ್ಮೇಗೌಡರು, ಜಾನಪದ ಸಾಹಿತಿ ಅಕಾಡಮಿ ಸದಸ್ಯೆ ಲಕ್ಷ್ಮೀದೇವಮ್ಮ, ಜಾನಪದ ಹಿತಿಯ ಕಲಾವಿದ ಮಾಳೇನಹಳ್ಳಿ ಬಸಪ್ಪ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯೆ ಸವಿತಾ ರಂಗಸ್ವಾಮಿ, ಕಲಾವಿದರ ಒಕ್ಕೂಟ ಅಧ್ಯಕ್ಷ ಕುಮಾರ್, ತಿಪ್ಪೇಶ್, ಹಾಲಸ್ವಾಮಿ, ಕಾರೇಹಳ್ಳಿ ಬಸವರಾಜಪ್ಪ ಹಾಲಸ್ವಾಮಿ ಇದ್ದರು.

ಅಪ್ಪಗೆರೆ ತಿಮ್ಮರಾಜು ಜಾನಪದ ಗೀತೆ ಮೂಲಕ ರಂಜಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ತಾಲ್ಲೂಕಿನ ಸಾಧಕರು ಹಾಗೂ ಕಲಾವಿದರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT