ಬುಧವಾರ, ಮಾರ್ಚ್ 29, 2023
32 °C

ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ್ದಕ್ಕೆ ಸಿದ್ದರಾಮಯ್ಯ ಕ್ಷಮೆಯಾಚಿಸಲಿ: ಸಿ.ಟಿ.ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ‘ದೇಶದ ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ್ದಕ್ಕೆ ಮೊದಲು ಸಿದ್ದರಾಮಯ್ಯ ಕ್ಷಮೆಯಾಚಿಸಲಿ’ ಎಂದು ಶಾಸಕ ಸಿ.ಟಿ. ರವಿ ಪ್ರತಿಕ್ರಿಯಿಸಿದರು.

‘ಮೋದಿ ಅವರು ಹೆಬ್ಬೆಟ್ಟು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜಗತ್ತಿನ ಬಹುತೇಕ ದೇಶಗಳಲ್ಲಿ ಮೋದಿ ಅವರನ್ನು ಜನರು ಗುರುತಿಸುತ್ತಾರೆ. ಸಿದ್ದರಾಮಯ್ಯ ಅವರನ್ನು ಕರ್ನಾಟಕದಿಂದ ಆಚೆಗೆ ಯಾರು ಗುರುತಿಸುತ್ತಾರೆ’ ಎಂದು ಪ್ರಶ್ನಿಸಿದರು.

‘ನಾನು ಟ್ವೀಟ್‌ ಮಾಡಿರುವುದು ತಪ್ಪು ಅನಿಸಿದರೆ, ಸಿದ್ದರಾಮಯ್ಯ ಅವರು ಬಸವರಾಜ ಬೊಮ್ಮಾಯಿ ಹಾಕಿದ ಕಂಬಳಿ ಬಗ್ಗೆ ಮಾತಾಡಿದ್ದು ತಪ್ಪು ಅನಿಸಿರಬೇಕಿತ್ತು’ ಎಂದರು.

‘ಅವರು ಭಾವಿಸಿರುವಂತೆ ನಾನು ಆರೋಪ ಮಾಡಿಲ್ಲ. ಕುರುಬ ಸಮುದಾಯದ ಬಗ್ಗೆಯೂ ಮಾತನಾಡಿಲ್ಲ. ಕುರುಬರು ನನ್ನ ಜೊತೆಗೇ ಇದ್ದಾರೆ. ಸಂಗೊಳ್ಳಿ ರಾಯಣ್ಣ, ಕನಕದಾಸರ ಬಗ್ಗೆ ನಂಬಿಕೆ ಇಟ್ಟಿರುವವರು ಹಿಂದುತ್ವದ ಬಗ್ಗೆಯೂ ನಂಬಿಕೆ ಇಟ್ಟಿರುತ್ತಾರೆ’ ಎಂದು ಪ್ರತಿಪಾದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು