ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಯಾವ ಕುಟುಂಬವು ಹೊರಗುಳಿಯದಂತೆ ನಿಗಾವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಂಘ ಸಂಸ್ಥೆಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು, ಪಡಿತರ ಚೀಟಿ ಇಲ್ಲದವರು, ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಕುಟುಂಬಗಳು ಸೇರಿ ಎಲ್ಲರೂ ಸಮೀಕ್ಷೆಗೆ ಒಳಪಡಲಿದ್ದಾರೆ. ಆಧಾರ ಕಾರ್ಡ್ ಹೊಂದಿದ್ದ ಬೇರೆ ರಾಜ್ಯ, ಬೇರೆ ಜಿಲ್ಲೆಯ ಕುಟುಂಬದವರು ನಮ್ಮ ಜಿಲ್ಲೆಯಲ್ಲಿ ವಾಸಿಸುತ್ತಿದ್ದರೆ, ಅಂತವರನ್ನು ಸಮೀಕ್ಷೆಗೆ ಒಳಪಡಿಸಿ ಅವರು ಈ ಮನೆಯಲ್ಲಿ ವಾಸವಿರುವ ಬಗ್ಗೆ ಗುರುತಿಸಲಾಗುತ್ತದೆ. ಮನೆ-ಮನೆ ಸಮೀಕ್ಷೆ ಸೆ.22 ರಿಂದ ಅ.7ರವೆರೆಗೆ ನಡೆಯಲಿದೆ ಎಂದರು.

ಜಿಲ್ಲೆಯಲ್ಲಿ ಸಮೀಕ್ಷೆಗೆ ಒಳಪಡುವ 3,31,740 ಕುಟುಂಬಗಳಿದ್ದು, 2,668 ಸಮೀಕ್ಷೆದಾರರು ಸಮೀಕ್ಷ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆಯ ದತ್ತಾಂಶ ಸಂಗ್ರಹಿಸಲಾಗುವುದು. ಸುಮಾರು 60 ಪ್ರಶ್ನೆಗಳಿರುತ್ತವೆ ಎಂದು ಹೇಳಿದರು.

ಮೆಸ್ಕಾಂ ವತಿಯಿಂದ ಪ್ರತಿ ಕುಟುಂಬಕ್ಕೆ ಯುಎಚ್ಐಡಿ (ಯುನಿಕ್ ಹೌಸ್ಹೋಲ್ಡ್ ಐ.ಡಿ) ನಂಬರ್ ಸೃಜಿಸಿ ಮನೆಗಳಿಗೆ ಸ್ಟಿಕ್ಕರ್ ಅಂಟಿಸಲಾಗಿದೆ. ಇದನ್ನು ಜಿಯೊ ಟ್ಯಾಗ್ ಮಾಡಲಾಗುತ್ತಿದೆ. ಒಂದು ವೇಳೆ ಯುಎಚ್ಐಡಿ ಸ್ಪೀಕರ್ ಯಾವುದೇ ಮನೆಗೆ ಅಂಟಿಸಿಲ್ಲವಾದಲ್ಲಿ ಕೂಡ ಯುಎಚ್ಐಡಿಯನ್ನು ಸೃಜಿಸಿಕೊಂಡು ಗಣತಿದಾರರು ಸಮೀಕ್ಷೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ವಿದ್ಯುತ್ ಸಂಪರ್ಕವಿಲ್ಲದೆ ಇರುವ ಮನೆಗಳ ವಿವರವನ್ನು ನೀಡಲು ತಿಳಿಸಲಾಗಿದೆ. ಈ ಮನೆಗಳನ್ನು ಸಹ ಜಿಯೋ ಟ್ಯಾಗ್ ಮಾಡಲಾಗುವುದು ಎಂದರು.

ಮನೆಯ ಮುಖ್ಯದ್ವಾರದಲ್ಲಿ ಅಂಟಿಸಿರುವ ಸ್ಪೀಕರ್ಗಳನ್ನು ಸಾರ್ವಜನಿಕರು ಗಣತಿ ಕಾರ್ಯ ಮುಗಿಯುವ ತನಕ ಗೀಚುವುದು, ಕಿತ್ತುಹಾಕುವುದು ಮಾಡಬಾರದು. ಸಮೀಕ್ಷೆಗೆ ಬರುವ ಶಿಕ್ಷಕರಿಗೆ ತಮ್ಮ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಕೋರಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಚ್.ಎಸ್ ಕೀರ್ತನಾ ಮಾತನಾಡಿ, ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಅಂಕಿ–ಅಂಶ ತುಂಬಾ ಮುಖ್ಯ. ಮುಂದಿನ ದಿನದಲ್ಲಿ ಈ ಅಂಕಿ–ಅಂಶಗಳು ಬೇರೆ-ಬೇರೆ ವಿಷಯಗಳಿಗೆ ಬುನಾದಿಯಾಗಲಿವೆ. ವಿವಿಧ ಸಮುದಾಯಗಳ ಮುಖಂಡರು ತಮ್ಮ ವ್ಯಾಪ್ತಿಯ ಜನರಿಗೆ ಈ ಸಮೀಕ್ಷೆ ಬಗ್ಗೆ ಅರಿವು ಮೂಡಿಸಬೇಕು. 60 ಪ್ರಶ್ನೆಗಳಿಗೆ ಮೊದಲೇ ಉತ್ತರಗಳನ್ನು ಸಿದ್ದಪಡಿಸಿಕೊಳ್ಳುವಂತೆ ಜನರಲ್ಲಿ ಮನವರಿಕೆ ಮಾಡಿಸಬೇಕು’ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಸ್ತಾಪಿಸಿ ಅರಿವು ಮೂಡಿಸಬೇಕು. ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳು 63617-89579 ಸಂಖ್ಯೆಗೆ ವಾಟ್ಸ್ಆ್ಯಪ್ನಲ್ಲಿ ಸಂದೇಶ ಕಳುಹಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.

ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಕಾಂತರಾಜ್ ಸಮೀಕ್ಷೆ ಕುರಿತು ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.