ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಗೃಹ ಕಟ್ಟಡ ವೀಕ್ಷಿಸಿದ ಎಸ್ಪಿ

Last Updated 2 ಡಿಸೆಂಬರ್ 2022, 6:40 IST
ಅಕ್ಷರ ಗಾತ್ರ

ಬಾಳೆಹೊನ್ನೂರು: ಪಟ್ಟಣದ ಕಡ್ಲೆಮಕ್ಕಿಯಲ್ಲಿ ನಿರ್ಮಾಣ ಹಂತದಲ್ಲಿರುವ ಪೊಲೀಸ್ ವಸತಿಗೃಹದ ಕಾಮಗಾರಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಪರಿಶೀಲಿಸಿದರು.

ನಂತರ ಮಾಧ್ಯಮದವದೊಂದಿಗೆ ಮಾತನಾಡಿದ ಅವರು, 36 ವಸತಿ ಗೃಹಗಳನ್ನು ₹ 8ಕೋಟಿ ವೆಚ್ಚದಲ್ಲಿ ಸರ್ಕಾರ ನಿರ್ಮಾಣ ಮಾಡುತ್ತಿದೆ. ಮಾ.23ರೊಳಗೆ ಕಾಮಗಾರಿ ಮುಕ್ತಾಯಗೊಳ್ಳಬೇಕಾಗಿದೆ. ಉತ್ತಮ ಗುಣಮಟ್ಟದ ಪರಿಕರಗಳನ್ನು ಬಳಸುವಂತೆ ನಿರ್ಮಾಣಕಾರರಿಗೆ ಸೂಚಿಸಲಾಗಿದೆ ಎಂದರು.

ದತ್ತಜಯಂತಿ ಅಂಗವಾಗಿ ಜಿಲ್ಲೆಯಲ್ಲಿ ಡಿಆರ್, ಕೆಎಸ್‌ಆರ್‌ಪಿ ಸೇರಿದಂತೆ ಸಿಬ್ಬಂದಿ ಬಳಸಿ ಬಿಗಿ ಬಂದೋಬಸ್ತ್ ಹಾಕಲಾಗಿದೆ. ಯಾವುದೇ ಅಹಿತಕರ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದತ್ತ ಜಯಂತಿಯಂದು ನಿರ್ದಿಷ್ಟ ಪ್ರದೇಶದಲ್ಲಿ ಸಂಜೆ ವೇಳೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗುತ್ತಿದೆ ಎಂದರು. ಕೊಪ್ಪ ಎಎಸ್ಪಿ ಗುಂಜನ್ ಆರ್ಯ, ಸಿಪಿಐ ಸತ್ಯನಾರಾಯಣ, ಪಿಎಸ್‌ಐ ವಿ.ಟಿ.ದಿಲೀಪ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT