ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೃಂಗೇರಿ ಶಾರದ ಪೀಠಕ್ಕೆ ನೂತನ ಆಡಳಿತಾಧಿಕಾರಿ

Published 25 ಜನವರಿ 2024, 20:31 IST
Last Updated 25 ಜನವರಿ 2024, 20:31 IST
ಅಕ್ಷರ ಗಾತ್ರ

ಶೃಂಗೇರಿ (ಚಿಕ್ಕಮಗಳೂರು): ಶೃಂಗೇರಿ ಶಾರದ ಪೀಠದ ನೂತನ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ಬೆಂಗಳೂರಿನ ಪಿ.ಎ ಮುರಳಿ ಅವರನ್ನು ನೇಮಕ ಮಾಡಲಾಗಿದ್ದು, ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ಮಠದ ಉಭಯ ಗುರುಗಳಾದ ಭಾರತೀ ತೀರ್ಥ ಸ್ವಾಮೀಜಿ ಮತ್ತು ವಿಧುಶೇಖರ ಭಾರತೀ ಸ್ವಾಮೀಜಿ ಅವರು ಗುರುವಾರ ಈ ನೇಮಕಾತಿ ಆದೇಶ ಹೊರಡಿಸಿದರು.

ಮಠದ ಈ ಹಿಂದಿನ ಗುರು ಅಭಿನವ ವಿದ್ಯಾತೀರ್ಥ ಸ್ವಾಮೀಜಿ ಅವರ ನಿರ್ದೇಶನದಂತೆ 1989ರಲ್ಲಿ ವಿ.ಆರ್. ಗೌರೀಶಂಕರ್ ಅವರನ್ನು ಶೃಂಗೇರಿ ಮಠದ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ನೇಮಕ ಮಾಡಲಾಗಿತ್ತು. ಅವರು 35 ವರ್ಷಗಳ ಕಾಲ ಮಠದ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರು ನೂತನ ಆಡಳಿತಾಧಿಕಾರಿ ಮತ್ತು ಸಿಇಒ ಪಿ.ಎ ಮುರಳಿ ಅವರಿಗೆ ಮುಖ್ಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಧುಶೇಖರ ಭಾರತೀ ಸ್ವಾಮೀಜಿ ಅವರು ಸನ್ಯಾಸ ಸ್ವೀಕರಿಸಿದ ದಿನವಾದ ಫೆ.12ರಂದು ವಿ.ಆರ್ ಗೌರೀಶಂಕರ್‌ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT