ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿ: ಎಂ.ಆರ್.ರವಿಶಂಕರ್

Last Updated 3 ಮೇ 2022, 5:20 IST
ಅಕ್ಷರ ಗಾತ್ರ

ನರಸಿಂಹರಾಜಪುರ: ‘ಮುಂದಿನ ವಿಧಾನಸಭಾ ಚುನಾವಣೆಗೆ ಶೃಂಗೇರಿ ಕ್ಷೇತ್ರದ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದೇನೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಕಾರ್ಯದರ್ಶಿ ಎಂ.ಆರ್.ರವಿಶಂಕರ್ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ನಾಗಿ ಈ ಹಿಂದೆ ಪಕ್ಷ ನೀಡಿದ ಎಲ್ಲ ಜವಾಬ್ದಾರಿಯನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಲಾಗಿದೆ. ಟಿಕೆಟ್ ನೀಡಿದರೆ ಸ್ಪರ್ಧೆಗೆ ಸಿದ್ಧನಿದ್ದೇನೆ. ಒಂದು ವೇಳೆ ಪಕ್ಷ ಬೇರೆಯವರಿಗೆ ಟಿಕೆಟ್‌ ನೀಡಿದರೆ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮವಹಿಸಿ ಕೆಲಸ ಮಾಡಲಾಗುವುದು’ ಎಂದರು.

‘ಶೃಂಗೇರಿ ಕ್ಷೇತ್ರದಲ್ಲಿನ ಹಿಂದೂ ಬ್ರಿಗೇಡ್‌ಗೂ ತಮಗೂ ಸಂಬಂಧವಿಲ್ಲ. ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರು ಮಾಹಿತಿ ಕೊರತೆಯಿಂದ ಹಿಂದೂ ಬ್ರಿಗೇಡ್‌ಗೆ ನನ್ನ ಹೆಸರನ್ನು ತಳಕು ಹಾಕುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಭೇಟಿ ಮಾಡಿ ಸ್ಪಷ್ಟನೆ ನೀಡಲಾಗುವುದು’ ಎಂದರು.

‘ಈಗಾಗಲೇ ನರಸಿಂಹರಾಜ ಪುರ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷರನ್ನು ಭೇಟಿ ಮಾಡಿ ಹಿಂದೂ ಬ್ರಿಗೇಡ್‌ನ ಹೇಳಿಕೆಗೂ ನಮಗಾಗಲಿ ಅಥವಾ ಕಾರ್ಯಕರ್ತರಿಗಾಗಲಿ ಯಾವುದೇ ಸಂಬಂಧವಿಲ್ಲ ಎಂಬ ಅಂಶವನ್ನು ಗಮನಕ್ಕೆ ತರಲಾಗಿದೆ’ ಎಂದರು.

‘ಕ್ಷೇತ್ರದ ಮೂರು ತಾಲ್ಲೂಕಿನ ಬಿಜೆಪಿ ಘಟಕದ ಅಧ್ಯಕ್ಷರನ್ನು ಭೇಟಿ ಮಾಡಿ ಹಿಂದುತ್ವದ ಆಧಾರದ ಮೇಲೆ ಮುಂದಿನ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸ ಬೇಕೆಂದು ಮನವಿ ಮಾಡಿದ್ದೇವೆ. ಪಕ್ಷದ ಸಂಘಟನೆ ಮುಂದಿನ ಒಂದು ವರ್ಷ ತೊಡಗಿಸಿಕೊಳ್ಳುವ ಬಗ್ಗೆ ಚರ್ಚಿಸಲಾಗಿದೆ’ ಎಂದರು.

ಪಕ್ಷದ ಜಿಲ್ಲಾಧ್ಯಕ್ಷರು, ಸಂಘಟನೆಯ ಹಿರಿಯರನ್ನು ಭೇಟಿ ಮಾಡಿ ಹಿಂದೂ ಬ್ರಿಗೇಡ್ ನಲ್ಲಿರುವ ಪಕ್ಷಕ್ಕೆ ದುಡಿದ ವ್ಯಕ್ತಿಗಳ ಅಭಿಪ್ರಾಯ ಸಂಗ್ರಹಿಸಿ ಅವರಿಗಿರುವ ಭಿನ್ನಾಭಿಪ್ರಾಯ ಸರಿಪಡಿಸಿ, ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳಲಾಗುವುದು ಎಂದರು.

ಬಿಜೆಪಿ ಎಸ್‌ಟಿ ಮೊರ್ಚಾದ ಮಾಜಿ ತಾಲ್ಲೂಕು ಅಧ್ಯಕ್ಷ ಜಯರಾಮ್, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಎಂ.ವಿ.ರಮೇಶ್, ಮುಖಂಡ ಗೋಪಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT