ಕೊಪ್ಪ: ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆಗಳು ಗುಂಡಿ ಬಿದ್ದು, ವಾಹನ ಸವಾರರು ಪ್ರಾಣ ಭಯದಿಂದ ಓಡಾಡುತ್ತಿದ್ದಾರೆ ಎಂದು ರಾಜ್ಯ ಜೆಡಿಎಸ್ ಹಿರಿಯ ಉಪಾಧ್ಯಕ್ಷ ಸುಧಾಕರ ಎಸ್.ಶೆಟ್ಟಿ ಹೇಳಿದರು.

ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಬಾಳೆಹೊನ್ನೂರು ಪಟ್ಟಣ ಪ್ರದೇಶದಲ್ಲಿ ರಸ್ತೆಗಳ ಸ್ಥಿತಿಗತಿ ಹದಗೆಟ್ಟಿದೆ. ಕೊಪ್ಪದಿಂದ ಎನ್.ಆರ್.ಪುರ ಕಡೆಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ದ್ವಿಚಕ್ರ ವಾಹನ ಸವಾರರು ಪ್ರಾಣ ಭಯದಿಂದ ಓಡಾಡುವಂತಾಗಿದೆ. ಪಟ್ಟಣ ಪಂಚಾಯಿತಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮೌನವಾಗಿರುವುದಕ್ಕೆ ಸರ್ಕಾರದ ಅನುದಾನ ಕೊರತೆ ಎದ್ದು ಕಾಣುತ್ತಿದೆ ಎಂದು ದೂರಿದ್ದಾರೆ.

ಶೃಂಗೇರಿ, ಬಾಳೆಹೊನ್ನೂರು, ಹರಿಹರಪುರ, ಭಂಡಿಗಡಿ ಮಠ, ಜ್ವಾಲಾಮಾಲಿನಿ ದೇವಸ್ಥಾನ, ಬಸ್ತಿಮಠಕ್ಕೆ ಬರುವ ಭಕ್ತಾದಿಗಳು, ಮಲೆನಾಡಿಗೆ ಬರುವ ಪ್ರವಾಸಿಗರು ತಮ್ಮ ಪ್ರವಾಸ ಮೊಟಕುಗೊಳಿಸಿದ್ದಾರೆ. ಕ್ಷೇತ್ರದ ಶಾಸಕರು ರಸ್ತೆ ದುರಸ್ತಿ ಬಗ್ಗೆ ಯಾವುದೇ ದೂರದರ್ಶಿತ್ವ ಯೋಜನೆ ಹಮ್ಮಿಕೊಳ್ಳದಿರುವುದು ದುರದೃಷ್ಟಕರ ಎಂದರು.

ರಸ್ತೆ ದುರಸ್ತಿಪಡಿಸುವಂತೆ ಶಾಸಕರ ಕಚೇರಿಗೆ ಸುಧಾಕರ ಶೆಟ್ಟಿ ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.