ಶೃಂಗೇರಿ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಸೂತಿ ಮತ್ತು ಮಕ್ಕಳ ತಜ್ಞರ ಅವಶ್ಯಕಯಿದ್ದು, ಸಮಾಲೋಚನೆ ವರ್ಗಾವಣೆಯಲ್ಲಿ ಇಬ್ಬರು ಪ್ರಸೂತಿ ತಜ್ಞರು ಇಲ್ಲಿನ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅದರಲ್ಲಿ ಒಬ್ಬರು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಹಾಲಿ ಅರಿವಳಿಕೆ ತಜ್ಞರು ಇದ್ದು ಶಸ್ತ್ರಚಿಕಿತ್ಸೆ ನಡೆಸಲು ಆರಂಭವಾಗಿದೆ. ಇಬ್ಬರು ಎಂ.ಬಿ.ಬಿ.ಎಸ್ ವೈದ್ಯರು ಕರ್ತವ್ಯದಲ್ಲಿ ಇದ್ದಾರೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಸ್ಪಷ್ಟಿಕರಣ ನೀಡಿದ್ದಾರೆ.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆ, ಆಡಳಿತ ವೈದ್ಯಾಧಿಕಾರಿಗಳಿಂದ ಮಹಿಳಾ ಸಿಬ್ಬಂದಿಗೆ ಕಿರುಕುಳ, ತಜ್ಞ ವೈದ್ಯರ ಕೊರತೆ, ಮೂಲಸೌಕರ್ಯ ಕೊರತೆ ಎಂದು ಫೆ. 24ರಂದು ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.

ಆಡಳಿತಾ ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ಅವರ ವಿರುದ್ಧ ಸಲ್ಲಿಸಲಾಗಿರುವ ದೂರಿನ ಬಗ್ಗೆ ಜಿಲ್ಲಾ ಸಮಿತಿ ಹಾಗೂ ಲೋಕಾಯುಕ್ತರಿಂದ ವಿಚಾರಣೆ ನಡೆಸಿದ್ದು, ತನಿಖಾ ವರದಿ ಬಂದ ನಂತರ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್ಬಾಬು ಎಚ್.ಎಸ್, ಮಲ್ಲೇಗೌಡ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಚಂದ್ರಶೇಖರ್ ಎಚ್.ಬಿ. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.