ಶೃಂಗೇರಿ ವಿಧಾನಸಭಾ ಕ್ಷೇತ್ರ. ಒಂದೇ ಅವಧಿಯಲ್ಲಿ ಎರಡು ಭಿನ್ನ ಫಲಿತಾಂಶ ಕಾಣುವ ಮೂಲಕ ಚುನಾವಣಾ ಇತಿಹಾಸದಲ್ಲಿಯೇ ಹೊಸ ದಾಖಲೆ ಸೃಷ್ಟಿಸಿದ ಕ್ಷೇತ್ರವಿದು. ಈ ಕ್ಷೇತ್ರದ ನೂತನ ಶಾಸಕರಾಗಿ, ಬಿಜೆಪಿಯ ಡಿ.ಎನ್. ಜೀವರಾಜ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, 2023ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದವರು ಕಾಂಗ್ರೆಸ್ನ ಟಿ.ಡಿ. ರಾಜೇಗೌಡ. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜೇಗೌಡ ಅವರು ಇಲ್ಲಿ ಗೆದ್ದದ್ದು ಕೇವಲ 201 ಮತಗಳಿಂದ ! ಈ ಫಲಿತಾಂಶ ಹೊರ ಬೀಳುತ್ತಿದ್ದಂತೆ, ಇವರ ಪ್ರತಿಸ್ಪರ್ಧಿ ಬಿಜೆಪಿಯ ಜೀವರಾಜ್, 1822ರ ಅಂಚೆ ಮತಗಳ ಮರು ಎಣಿಕೆ ಮಾಡುವಂತೆ ಕೋರಿ, ಹೈಕೋರ್ಟ್ ಮೆಟ್ಟಿಲೇರಿದರು. ಮರು ಎಣಿಕೆ ನಂತರ, ಜೀವರಾಜ್ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗುರುವಾರ ನ್ಯಾಯಾಲಯದಲ್ಲಿ ಮತ್ತೊಮ್ಮೆ ಈ ವಿಷಯ ವಿಚಾರಣೆಗೆ ಬರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.