ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಖಚಿತವಾಗಿದೆ. ಮಾಹಿತಿ ದೊರೆತ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಜೆಡಿಎಸ್ ಅಭ್ಯರ್ಥಿಯಾಗಿದ್ದ ಸುಧಾಕರ ಶೆಟ್ಟಿ ಅವರು ಎಣಿಕಾ ಕೇಂದ್ರದಿಂದ ಹೊರ ಬಂದು, 'ತಿರಸ್ಕೃತ ಮತಗಳ ಪರಿಶೀಲನೆ ಬಹುತೇಕ ಮುಕ್ತಾಯವಾಗಿದೆ. ಈವರೆಗೆ ಪರಿಶೀಲನೆ ವೇಳೆ ಯಾವುದೇ ಮತಪತ್ರ ಪುರಸ್ಕೃತವಾಗಿಲ್ಲ. 2023ರ ಚುನಾವಣೆ ಫಲಿತಾಂಶದ ಪ್ರಕಾರ ಟಿ.ಡಿ.ರಾಜೇಗೌಡ 201 ಗೆದ್ದಿದ್ದರು. ಇಂದಿನ ಮರು ಎಣಿಕೆಯಿಂದ ಫಲಿತಾಂಶದಲ್ಲಿ ವ್ಯತ್ಯಾಸ ಆಗುವುದಿಲ್ಲ' ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಎಣಿಕಾ ಕೇಂದ್ರದ ಬಳಿ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ರಾಜೇಗೌಡ ಪರ ಜಯಘೋಷ ಮೊಳಗಿಸಿ ಕುಣಿದು ಕುಪ್ಪಳಿಸಿದರು.

ಅಂಚೆ ಮತಗಳ ಮರು ಎಣಿಕೆ ಕೋರಿ ಪರಾಜಿತ ಅಭ್ಯರ್ಥಿ ಬಿಜೆಪಿಯ ಡಿ.ಎನ್.ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. ಮರು ಎಣಿಕೆಗೆ ಹೈಕೋರ್ಟ್ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.