‘ಮಠಕ್ಕೂ ಕಾಮಗಾರಿಗೂ ಸಂಬಂಧವಿಲ್ಲ’:
ಶೃಂಗೇರಿ ಮಠದ ಆಡಳಿತಾಧಿಕಾರಿ ಪಿ.ಎ ಮುರುಳಿ ಅವರನ್ನು ಇತ್ತೀಚೆಗೆ ಭೇಟಿ ಮಾಡಿದ್ದ ವೀರಪ್ಪಗೌಡ ಅಭಿಮಾನಿ ಬಳಗದ ಮುಖಂಡರು ಶಂಕರಾಚಾರ್ಯರ ವಿಗ್ರಹ ಪ್ರತಿಷ್ಠಾಪನಾ ಕಾರ್ಯ ಕೈಬಿಡಬೇಕು ಎಂದು ಮನವಿ ಮಾಡಿದ್ದರು. ‘ಶಂಕರಾಚಾರ್ಯರ ಮೂರ್ತಿ ಸ್ಥಾಪಿಸಲು ಶಾರದಾ ಪೀಠದಿಂದ ವಿಗ್ರಹ ಕೇಳಿದ್ದಾರೆಯೇ ಹೊರತು ಮಠದಿಂದ ಯಾವುದೇ ಕಾಮಗಾರಿ ನಡೆಸುತ್ತಿಲ್ಲ. ವೃತ್ತದಲ್ಲಿ ಪ್ರತಿಮೆ ನಿರ್ಮಿಸುವುದು ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರಕ್ಕೆ ಸಂಬಂಧಪಟ್ಟ ವಿಷಯ. ಮಠಕ್ಕೂ ವೃತ್ತದಲ್ಲಿ ಪ್ರತಿಮೆ ನಿರ್ಮಾಣ ಕಾಮಗಾರಿಗೂ ಸಂಬಂಧವಿಲ್ಲ’ ಎಂದು ಹೆಸರು ಹೇಳಲು ಇಚ್ಚಿಸದ ಶಾರದಾ ಮಠದ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.