ಶೃಂಗೇರಿ: ಕುಡಿಯುವ ನೀರಿಗೆ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಗಳೂ ತುಂಗಾ ನದಿ ಮತ್ತು ಮಾಲತಿ ನದಿಯನ್ನು ಆಶ್ರಯಿಸಿಕೊಂಡಿವೆ. ನೈಸರ್ಗಿಕವಾಗಿಯೂ ನೀರು ಲಭಿಸುವುದರಿಂದ ಈ ವರೆಗೆ ಸಮಸ್ಯೆ ಎದುರಾಗಲಿಲ್ಲ. ಆದರೂ ಮುಂಜಾಗ್ರತೆಯಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸಿದ್ಧತೆ ನಡೆದಿದೆ.

ಈ ಭಾಗದಲ್ಲಿ ಕೆಲವು ದಿನ ಮಳೆಯಾಗಿದೆ. ಆದರೂ ಬಿಸಿಲಿನ ಬೇಗೆ ಹೆಚ್ಚುತ್ತಲೇ ಇದೆ. ಬಿಸಿಲು ಇದೇ ರೀತಿ ಮುಂದುವರಿದು ತುಂಗೆ ಮತ್ತು ಮಾಲತಿ ನದಿಗಳು ಬತ್ತಿದರೆ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುವ ಆತಂಕ ಇದೆ.

ತಾಲ್ಲೂಕಿನ ಬಹುತೇಕ ಕಡೆಗಳಲ್ಲಿ ತುಂಗಾ ನದಿಯನ್ನು ನೇರವಾಗಿ ಆಶ್ರಯಿಸಲಾಗಿದೆ. ಹಳ್ಳ, ತೊರೆ, ನೈಸರ್ಗಿಕ ನೀರಿನ ಮೂಲವನ್ನು ಬಳಸುವವರೂ ಇದ್ದಾರೆ. ಹೀಗಾಗಿ ಈಗ ಜಲಸಮೃದ್ಧಿ ಇದೆ. ಮುಂದೆ ನೀರಿನ ಅಭಾವ ಎದುರಿಸಬಹುದಾದ ಗ್ರಾಮಗಳ ಪಟ್ಟಿಯನ್ನು ಗ್ರಾಮ ಪಂಚಾಯಿತಿ ಸಿದ್ಧಪಡಿಸಿದೆ. 8 ಗ್ರಾಮ ಪಂಚಾಯಿತಿಗಳ 14 ಗ್ರಾಮಗಳಲ್ಲಿ ಸಮಸ್ಯೆ ತಲೆದೋರಬಹುದು ಎಂದು ಗುರುತಿಸಲಾಗಿದೆ. ಈ ಗ್ರಾಮಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯೂ ನಡೆದಿದ್ದು ಸಮಸ್ಯೆ ಆದರೆ ಕೈಗೊಳ್ಳಬೇಕಾದ ಕ್ರಮಗಳನ್ನು ಸೂಚಿ ಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸುದೀಪ್ ಎಚ್ ‘ಪ್ರಜಾವಾಣಿ’ಗೆ ತಿಳಿಸಿದರು. ತಾಲ್ಲೂಕಿನಲ್ಲಿ ನೀರಿನ ಅಭಾವ ತಲೆದೋರುವ ಸಾಧ್ಯತೆ ತೀರಾ ಕಡಿಮೆ ಎಂದು ಅಧಿಕಾರಿಗಳು ಈಗಲೂ ಭರವಸೆಯಲ್ಲಿದ್ದಾರೆ. ಹಾಗೇನಾದರೂ ಅಗತ್ಯ ಬಿದ್ದರೆ ಖಾಸಗಿ ಕೊಳವೆ ಬಾವಿಗಳಿಂದ ಪಡೆದು ಅಥವಾ ಟ್ಯಾಂಕರ್ ಮೂಲಕ ಪೂರೈಸಲಾಗುವುದು.

ಗ್ರಾಮ ಪಂಚಾಯಿತಿಯ 15ನೇ ಹಣಕಾಸು ಯೋಜನೆಯಡಿ ಅನುದಾನ ಬಳಸಿಕೊಳ್ಳಲು ಸೂಚಿಸಲಾಗಿದೆ. ಟಾಸ್ಕ್ ಪೋರ್ಸ್ನಲ್ಲಿ ಶೃಂಗೇರಿ ಕ್ಷೇತ್ರಕ್ಕೆ ₹ 30 ಲಕ್ಷ ಅನುದಾನ ಮೀಸಲಿಟ್ಟಿದ್ದು ಶಾಸಕರು ಸೂಚಿಸಿದರೆ ಮುಂದಿನ ಕ್ರಮ ಕೈಗೊಳ್ಳಬಹುದು ಎಂದು ಸುದೀಪ್ ಎಚ್ ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-126-317824031

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.