ಚಿಕ್ಕಮಗಳೂರು: ಕಲಿಕೆಯ ವಯಸ್ಸಿನಲ್ಲಿ ವಿದ್ಯಾರ್ಥಿಗಳು ಮೊಬೈಲ್ ಚಟಗಳಿಗೆ ಬಲಿಯಾಗದೆ ವಿದ್ಯಾಭ್ಯಾಸದ ಕಡೆ ಗಮನ ಹರಿಸಿದರೆ ಭವಿಷ್ಯದಲ್ಲಿ ತಲುಪಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಹೇಳಿದರು.

ತಾಲ್ಲೂಕಿನ ಅಂಬಳೆ ಹೋಬಳಿಯ ಕೆ.ಆರ್.ಪೇಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಮಕ್ಕಳ ವಿಶೇಷ ಗ್ರಾಮಸಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಮಕ್ಕಳಿಗೆ ಆಯೋಜಿಸಿರುವ ಗ್ರಾಮಸಭೆ ಅತ್ಯಂತ ಉತ್ತಮ ಬೆಳವಣಿಗೆ. ಇದು ಮಕ್ಕಳ ಹಕ್ಕುಗಳ ಪ್ರಶ್ನಿಸುವ ಒಂದು ವೇದಿಕೆ. ಹಾಗಾಗಿ ವಿದ್ಯಾರ್ಥಿಗಳು ಮುಕ್ತವಾಗಿ ಸಭೆಯಲ್ಲಿ ಚರ್ಚಿಸುವ ಮೂಲಕ ಕಾರ್ಯಕ್ರಮದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಗ್ರಾ.ಪಂ.ಸದಸ್ಯ ಟಿ.ಬಿ.ಶಿವಪ್ರಸಾದ್ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸಭೆ ಆಯೋಜಿಸಿ ವಿದ್ಯಾರ್ಥಿಗಳ ಹಕ್ಕು ಎತ್ತಿ ಹಿಡಿಯುತ್ತಿದೆ. ಇದು ಮುಂದಿನ ದಿನಗಳಲ್ಲಿ ಉಪಯೋಗಕ್ಕೆ ಬರಲಿದೆ ಎಂದು ತಿಳಿಸಿದರು.

ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪರೀದಾ ಭಾನು, ಗ್ರಾ.ಪಂ. ಅಧ್ಯಕ್ಷೆ ಮಮತಾ, ಉಪಾಧ್ಯಕ್ಷ ನಿಂಗಯ್ಯ, ನವ್ಯಾ, ಬಿ.ಎಂ.ರಾಘವೇಂದ್ರ, ಕೆ.ಎಸ್.ಮಂಜುನಾಥ್, ಎಂ.ಎಸ್.ಮೈತ್ರಿ, ಗೀತಾ, ಕೆ.ಎಂ.ಚೈತ್ರಾ, ಹಿರಿಯ ಆರೋಗ್ಯ ನಿರೀಕ್ಷಕ ಜಿ.ಡಿ. ಮೂರ್ತಿ, ಎಂ.ಎಚ್.ಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.