ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡೂರು | ಕಾಲೇಜಿನ ಅವ್ಯವಸ್ಥೆ: ವಿದ್ಯಾರ್ಥಿಗಳ ಪ್ರತಿಭಟನೆ

Published 27 ನವೆಂಬರ್ 2023, 13:32 IST
Last Updated 27 ನವೆಂಬರ್ 2023, 13:32 IST
ಅಕ್ಷರ ಗಾತ್ರ

ಕಡೂರು: ಪಟ್ಟಣದ ಉಳುಕಿನಕಲ್ಲು ಬಳಿಯಿರುವ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಅವ್ಯವಸ್ಥೆ ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪ್ರಥಮ, ದ್ವಿತೀಯ ಪಿಯುಸಿಯಲ್ಲಿ 102ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಶೈಕ್ಷಣಿಕ ವರ್ಷ ಪೂರ್ಣಗೊಳ್ಳುವ ಹಂತಕ್ಕೆ ಬಂದರೂ ಪ್ರಯೋಗಾಲಯ ಪಾಠಗಳು ನಡೆದಿಲ್ಲ. ರಸಾಯನ ವಿಜ್ಞಾನ ಮತ್ತು ಗಣಿತದ ಪಾಠಗಳು ಬಾಕಿ ಉಳಿದಿವೆ. ಉಪನ್ಯಾಸಕರಿಲ್ಲದಿರುವುದೇ ಇದಕ್ಕೆ ಕಾರಣ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಕೆಲ ಪೋಷಕರು ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.

ಸ್ಥಳಕ್ಕೆ ಬಂದ ಕಾಲೇಜಿನ ಆಡಳಿತ ಮಂಡಳಿಯ ಮುಖ್ಯಸ್ಥ ಬೀರೂರು ವಿನಾಯಕ್ ಅವರು, ಪೋಷಕರು ಮತ್ತು ವಿದ್ಯಾರ್ಥಿಗಳ ಮನವಿ ಆಲಿಸಿ, ಒಂದು ವಾರದೊಳಗೆ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಜೊತೆಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಅಂತ್ಯಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT