ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಪದ ಕ್ರೀಡೆಗೆ ಒತ್ತು ನೀಡಬೇಕು: ಕೆ.ಎನ್. ರಮೇಶ್

ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಯ ಸಮಾರೋಪ
Last Updated 9 ಅಕ್ಟೋಬರ್ 2022, 7:21 IST
ಅಕ್ಷರ ಗಾತ್ರ

ತರೀಕೆರೆ: ಪ್ರಾಚೀನ ಕ್ರೀಡೆ ಕುಸ್ತಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಹೇಳಿದರು.

ಪಟ್ಟಣದ ಬಯಲು ರಂಗ ಮಂದಿರದಲ್ಲಿ ಶ್ರೀ ಗುರು ರೇವಣಸಿದ್ದೇಶ್ವರ ಕುರುಬ ಸಮಾಜ, ಶ್ರೀ ಗುರು ರೇವಣಸಿದ್ದೇಶ್ವರ ಗರಡಿ ಕುಸ್ತಿ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ನಡೆದ ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಯ ಸಮಾರೋಪದಲ್ಲಿ ಮಾತನಾಡಿದರು.

ಜಂಗಿ ಕುಸ್ತಿ ಜನಪದ ಕ್ರೀಡೆಗಳಲ್ಲಿ ಒಂದಾಗಿದೆ. ಚಿಕ್ಕಮಗಳೂರು ಹಬ್ಬದಲ್ಲಿ ಕುಸ್ತಿ ಪಟುಗಳಿಗೆ ಅವಕಾಶ ನೀಡಲಾಗುವುದು ಎಂದರು.

ಶಾಸಕ ಡಿ.ಎಸ್.ಸುರೇಶ್ ಮಾತನಾಡಿ, ತರೀಕೆರೆ ಕುಸ್ತಿ ಪಾಳೆಗಾರರ ಕಾಲದಿಂದಲೂ ಪ್ರಸಿದ್ಧಿ ಪ‍ಡೆದಿದೆ ಎಂದರು.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌, ಮಾಜಿ ಶಾಸಕ ಟಿ.ಎಚ್.ಶಿವಶಂಕರಪ್ಪ, ಸಮಾಜ ಮುಖಂಡ ಎಚ್. ಎಂ.ಗೋಪಿಕೃಷ್ಣ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಾ.ಅಂಶುಮಂತ್, ಕುರುಬ ಸಮಾಜದ ಅಧ್ಯಕ್ಷ ಡಿ.ವಿ.ಪದ್ಮರಾಜು, ಎಐಸಿಸಿ ಕಾರ್ಯದರ್ಶಿ ಸಂದೀಪ್, ಪುರಸಭಾ ಸದಸ್ಯ ಶಶಾಂಕ್ ಮಾತನಾಡಿದರು.

ಮಾಜಿ ಶಾಸಕ ಎಸ್ .ಎಂ.ನಾಗರಾಜು, ತಹಶೀಲ್ದಾರ್ ಪೂರ್ಣಿಮಾ, ಪುರಸಭೆ ಮುಖ್ಯಾಧಿಕಾರಿ ಮಹಂತೇಶ್, ಪತ್ರಕರ್ತ ಎನ್. ರಾಜು, ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಟಿ.ಎಲ್.ರಮೇಶ್, ನಿರ್ದೇಶಕ ಗಿರೀಶ್ ಚವ್ಣಾಣ್, ಮುಖಂಡರಾದ ಧ್ರುವಕುಮಾರ್, ದೋರಾನಾಳು ಪರಮೇಶ್ , ಮಹೇಂದ್ರ, ಪುರಸಭಾ ಸದಸ್ಯರಾದ ಕುಮಾರ್, ಭೋಜರಾಜ್, ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಹಾಲವಜ್ರಪ್ಪ, ಆರ್. ದೇವಾನಂದ್, ಗರಡಿ ಕುಸ್ತಿ ಸಂಘದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಹರೀಶ್, ಬೈಟು ರಮೇಶ್, ತಾಳಿಕಟ್ಟೆ ಲೋಕೇಶ್, ರವಿಕಿಶೋರ್, ಕರಕುಚ್ಚಿ ಕುಮಾರ್, ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT