ಶನಿವಾರ, ಜನವರಿ 29, 2022
22 °C

ಚಿಕ್ಕಮಗಳೂರು: ಸ್ವಾಮಿ ವಿವೇಕಾನಂದ ಆದರ್ಶ ಅನುಕರಣೀಯ -ಜಿಲ್ಲಾಧಿಕಾರಿ ಕೆಎನ್ ರಮೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ‘ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು. ಗುರು, ಪರಿಶ್ರಮ, ಆತ್ಮವಿಶ್ವಾಸದ ಮೂಲಕ ಗುರಿ ಮುಟ್ಟಬೇಕು ಎಂಬುದು ಸ್ವಾಮಿ ವಿವೇಕಾನದ ಅವರ ನಿಲುವು’ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದ ಅವರ ಜಯಂತ್ಯುತ್ಸವ ಅಂಗವಾಗಿ ಏರ್ಪಡಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಕರು ಸ್ವಾಮಿ ವಿವೇಕಾನಂದ ಅವರ ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳು ಸದೃಢ ಪ್ರಜೆಗಳಾಗಲು ಸಾಧ್ಯ ಎಂದು ಹೇಳಿದರು.

ಸ್ವಾಮಿ ವಿವೇಕಾನಂದ ಅವರು ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿದ ಮಹನೀಯ ಎಂದು ಬಣ್ಣಿಸಿದರು.

ಉಪನ್ಯಾಸಕಿ ನಾಗಶ್ರೀ ಮಾತನಾಡಿ, ಸ್ವಾಮಿ ವಿವೇಕಾನಂದ ಅವರು ಚಿಕಾಗೋ ಸಮ್ಮೇಳನದಲ್ಲಿ ಭಾಗವಹಿಸಲು ಆರ್ಥಿಕ ಸಹಕಾರ ನೀಡಿದ ಅಳಸಿಂಗ ಪೆರುಮಾಳ್ ಮೂಲತಃ ಚಿಕ್ಕಮಗಳೂರು ಜಿಲ್ಲೆಯವರು ಎಂದು ಹೇಳಿದರು.

ಮಕ್ಕಳನ್ನು ಉತ್ತಮ ನಾಗರೀಕರನ್ನಾಗಿ ಬೆಳೆಸುವಲ್ಲಿ ಪೋಷಕರ ಚಿಂತನೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಪೋಷಕರು ಮಕ್ಕಳಿಗೆ ಉತ್ತಮ ವಿದ್ಯೆ, ಚಿಂತನೆಗಳನ್ನು ಮೈಗೂಡಿಸಬೇಕು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಎಸ್‌.ಶ್ರುತಿ, ಉಪವಿಭಾಗಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಎಚ್.ಪಿ. ಮಂಜುಳಾ, ನಗರಸಭೆ ಸದಸ್ಯ ವರಸಿದ್ಧಿ ವೇಣುಗೋಪಾಲ್, ಮುಖಂಡ ಎ.ಎನ್. ಮಹೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.