ಮೂಡಿಗೆರೆಯಲ್ಲಿ ಈಚೆಗೆ ನಡೆದ ಶಿಕ್ಷಕರ ದಿನದ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಅನುದಾನಿತ ಶಾಲಾ ಶಿಕ್ಷಕರ ಸಂಘದ ವತಿಯಿಂದ ಪ್ರಶಸ್ತಿ ವಿತರಿಸಲಾಯಿತು. ರೀನಾ ಅವರು, 25 ವರ್ಷಗಳಿಂದ ಹಿರೇಬೈಲು ಸೇಕ್ರೆಡ್ ಹಾರ್ಟ್ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮಕ್ಕಳಿಗೆ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದಾರೆ.