ಕ್ರೀಡಾಕೂಟದಲ್ಲಿ ಮಹಿಳೆಯರು ಹಾಗೂ ಪುರುಷರಿಗೆ 100 ರಿಂದ 5 ಸಾವಿರ ಮೀಟರ್‌ವರೆಗಿನ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಎಸೆತ, ಡಿಸ್ಕಸ್ ಎಸೆತ ಸೇರಿದಂತೆ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಗುಂಪು ಸ್ಪರ್ಧೆಯಲ್ಲಿ ವಾಲಿಬಾಲ್, ಕಬ್ಬಡಿ, ಖೋಖೊ, ಥ್ರೋಬಾಲ್, ಬ್ಯಾಡ್ಮಿಂಟನ್ ಆಯೋಜಿಸಲಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವರು 9483810592, 6361019905 ಸಂಖ್ಯೆಗೆ ಕರೆ ಮಾಡಿ ಹೆಸರು ನೊಂದಾಯಿಸಿಕೊಳ್ಳಬೇಕು’ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.